ಜವಾಹರಲಾಲ್ ನೆಹರೂ ವಿವಿ ಹಾಸ್ಟೆಲ್ ನಲ್ಲಿ ಪಿಎಚ್ಡಿ ವಿದ್ಯಾರ್ಥಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

JNU

ನವದೆಹಲಿ, ಅ.26- ಇಲ್ಲಿನ ಜವಾಹರ್ಲಾಲ್ ನೆಹರೂ ವಿವಿ ಕ್ಯಾಂಪಸ್ನ ಹಾಸ್ಟೆಲ್ ಕೊಠಡಿಯಲ್ಲಿ ಪಿಎಚ್ಡಿ ವಿದ್ಯಾರ್ಥಿ ನಿಗೂಢವಾಗಿ ಸಾವಿಗೀಡಾಗಿರುವುದು ನಿನ್ನೆ ಬೆಳಕಿಗೆ ಬಂದಿದೆ. ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿದೆ. ನಿನ್ನೆ ಸಂಜೆ ವಿದ್ಯಾರ್ಥಿ ಮಣಿಪುರ ಮೂಲದ ಜೆಆರ್ ಫಿಲೆಮಾನ್ ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಕಳೆದ ಮೂರು ದಿನಗಳಿಂದ ವಿದ್ಯಾರ್ಥಿ ನಾಪತ್ತೆಯಾಗಿದ್ದ ಎಂದು ಆತನ ಸಹಪಾಠಿಗಳು ತಿಳಿಸಿದ್ದಾರೆ. ಕಳೆದ ಮೂರು ದಿನಗಳಿಂದ ವಿದ್ಯಾರ್ಥಿ, ಕೊಠಡಿಯ ಬೀಗ ಹಾಕಿಕೊಂಡಿದ್ದ. ಹಾಸ್ಟೆಲ್ನ ಇತರ ವಿದ್ಯಾರ್ಥಿಗಳು, ಕೊಠಡಿಯಿಂದ ಕೆಟ್ಟ ವಾಸನೆ ಬರುತ್ತಿರುವ ಬಗ್ಗೆ ಗಮನಕ್ಕೆ ತಂದರು. ಈ ಬಗ್ಗೆ ಭದ್ರತಾ ಸಿಬ್ಬಂದಿ ಗಮನಕ್ಕೆ ತಂದರು. ಪೊಲೀಸರು ಬಳಿಕ ಕೊಠಡಿಯ ಬಾಗಿಲು ಒಡೆದು ನೋಡಿದಾಗ, ಕೊಳೆತ ಶವ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ಮಣಿಪುರ ಮೂಲದ ಸಂಶೋಧನಾ ವಿದ್ಯಾರ್ಥಿ ಜೆ.ಆರ್.ಫಿಲೆಮಾನ್ ರಾಜ, ಜೆಎನ್ಯು ಬ್ರಹ್ಮಪುತ್ರ ಹಾಸ್ಟೆಲ್ನ 171ನೇ ಕೊಠಡಿಯಲ್ಲಿ ವಾಸವಿದ್ದ. ಪಶ್ಚಿಮ ಏಷ್ಯಾ ವಿಚಾರ ಬಗ್ಗೆ ಸಂಶೋಧನೆ ನಡೆಸುತ್ತಿದ್ದ. ಒಂದು ವರ್ಷದ ಹಿಂದೆ ವಿವಿ ಸೇರಿದ್ದ. ಪ್ರಾಥಮಿಕ ತನಿಖೆಯಿಂದ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಅದಾಗ್ಯೂ ದೇಹವನ್ನು ಅಟಾಪ್ಸಿಗಾಗಿ ಎಐಐಎಂಎಸ್ಗೆ ಕಳುಹಿಸಲಾಗಿದೆ. ಮಣಿಪುರದ ಸೇನಾಪತಿ ಜಿಲ್ಲೆಯಲ್ಲಿರುವ ಅವರ ಕುಟಂಬಕ್ಕೆ ವಿಷಯ ತಿಳಿಸಲಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ. ದೇಹವನ್ನು ಗುರುತಿಸಲು ಸಾಧ್ಯವಾಗದಷ್ಟು ಅದು ಕೊಳೆತು ಹೋಗಿದೆ. ಯಾವುದೇ ಗಾಯದ ಗುರುತುಗಳು ದೇಹದ ಮೇಲಿಲ್ಲ. ಆದರೆ, ಸಾವಿನ ಕಾರಣ ಅಟಾಪ್ಸಿ ಬಳಿಕವಷ್ಟೇ ತಿಳಿಯಲಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಧಾವಿಸಿರುವ ಜೆಎನ್ಯು ಪೊಲೀಸರು ಶವದ ಮಹಜರು ಮಾಡಿದ್ದಾರೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಎಬಿವಿಪಿ ಸಂಘಟನೆಯೊಂದಿಗೆ ಜಗಳ ಮಾಡಿಕೊಂಡಿದ್ದ ನಜೀಬ್ ಅಹ್ಮದ್ ಎಂಬಾತ ಕೂಡ ಈ ಹಿಂದೆ ನಾಪತ್ತೆಯಾಗಿದ್ದ. ಈ ಹಿನ್ನಲೆಯ ಆತನಮ ಪೋಷಕರು ಹಾಗೂ ವಿದ್ಯಾರ್ಥಿಗಳು ಕಳೆದ ಅ.15ರಂದು ಭಾರಿ ಪ್ರತಿಭಟನೆ ನಡೆಸಿದ್ದರು. ಇದೇ ಕಾರಣಕ್ಕೆ ವಿವಿಯ ಉಪಕುಲಪತಿಗಳನ್ನು ಹಾಗೂ ಇತರೆ ಅಧಿಕಾರಿಗಳನ್ನು ಪ್ರತಿಭಟನಾಕಾರರು ಕೊಠಡಿಯಲ್ಲಿ ಕೂಡಿ ಹಾಕಿ ಪ್ರತಿಭಟನೆ ನಡೆಸಿದ್ದರು.

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin