ಜಾತಿಯ ವಿಷ ಬೀಜ ಬಿತ್ತುವುದರಲ್ಲಿ ಕಾಂಗ್ರೆಸ್’ನವರು ನಿಸ್ಸಿಮರು : ಕಾರಜೋಳ ಗರಂ
ಬೆಂಗಳೂರು,ಅ.18- ಕೋಮುಭಾವನೆ ಕೆರಳಿಸಿ ಜಾತಿ, ಧರ್ಮಗಳ ನಡುವೆ ಒಡಕು ಉಂಟು ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರೆಂದು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಗೋವಿಂದ್ ಕಾರಜೋಳ ಇಂದಿಲ್ಲಿ ಕಿಡಿಕಾರಿದ್ದಾರೆ. ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೆಂಗಳೂರು ನಗರ ಜಿಲ್ಲೆ ಎಸ್ಸಿ-ಎಸ್ಟಿ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಕಲಿ ಜಾತ್ಯಾತೀತ ಪಕ್ಷ. ಕೇವಲ ವೋಟ್ ಬ್ಯಾಂಕ್ಗಾಗಿ ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರ ಮೂಗಿಗೆ ತುಪ್ಪ ಸವರುತ್ತ ಬಂದಿದೆ.
ಮಾಜಿ ಸಚಿವ, ದಲಿತ ಮುಖಂಡ ವಿ.ಶ್ರೀನಿವಾಸ್ ಪ್ರಸಾದ್ ಪಕ್ಷ ತೊರೆದಿರುವುದು ಕಾಂಗ್ರೆಸ್ನ ನಿಜವಾದ ಬಣ್ಣ ಬಯಲಾಗಿದೆ ಎಂದು ವಾಗ್ದಾಳಿ ನಡೆಸಿದರು. ದೇಶಕ್ಕೆ ಸ್ವಾತಂತ್ರ್ಯ ಬಂದ ಮೇಲೆ ಯಾರಾದರೂ ಉದ್ದಾರವಾಗಿದ್ದರೆ ಅದು ಕಾಂಗ್ರೆಸ್ನವರು ಮಾತ್ರ. ದೀನದಲಿತರ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದಿರುವ ಇವರು ಈ ಸಮುದಾಯದ ಅಭಿವೃದ್ದಿಗೆ ಏನು ಕೊಡುಗೆ ಕೊಟ್ಟಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.
► Follow us on – Facebook / Twitter / Google+