ಜಾರಿ ನಿರ್ದೇಶನಾಲಯ ಮುಂದೆ ಹಾಜರಾದ ಹಿಮಾಚಲ ಪ್ರದೇಶ ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

singh

ನವದೆಹಲಿ, ಏ.20-ಸರ್ಕಾರದ ಹಣ ದುರ್ಬಳಕೆ ಪ್ರಕರಣ ಸಂಬಂಧ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ವೀರಭದ್ರಸಿಂಗ್ ಇಂದು ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ಹಾಜರಾದರು. ಜಾರಿ ನಿರ್ದೇಶನಾಲಯ ಅಧಿಕಾರಿಗಳ ಸೂಚನೆ ಮೇರೆಗೆ ಸಿಂಗ್ ಇಡಿ ಕಚೇರಿಗೆ ಆಗಮಿಸಿದ್ದು, ಹಣ ದುರ್ಬಳಕೆಯಾಗಿದೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸಿದರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನು ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದ್ದು, ಹಣ ದುರ್ಬಳಕೆಯಿಂದ ಗಳಿಸಿರುವ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin