ಜಾರ್ಜ್ ಅವರು ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ : ರುದ್ರಪ್ಪ ಲಮಾಣಿ

ಈ ಸುದ್ದಿಯನ್ನು ಶೇರ್ ಮಾಡಿ

Rudrappa-Manappa-Lamani

ತುಮಕೂರು,ಸೆ.16-ಸಚಿವ ಕೆ.ಜಿ.ಜಾರ್ಜ್ ಅವರು ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ. ಈಗಾಗಲೇ ಒಂದು ಬಾರಿ ರಾಜೀನಾಮೆ ನೀಡಿ ನಂತರ ಸಿಐಡಿ ವರದಿಯಿಂದ ಅವರ ಮೇಲಿನ ಆರೋಪ ನಿರಾಧಾರ ಎಂದು ಸಾಬೀತಾಗಿದೆ ಎಂದು ಜವಳಿ ಮತ್ತು ಮುಜರಾಯಿ ಇಲಾಖೆ ಸಚಿವ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಜೆಪಿಯವರು ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಅವರು ಇಲ್ಲಸಲ್ಲದ ಗೊಂದಲಗಳನ್ನು ಸೃಷ್ಟಿ ಮಾಡುವ ಕಾಯಕದಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದರು.

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ರಾಜಕೀಯಕರಣಗೊಳಿಸುವ ಕೆಲಸವಾಗುತ್ತಿದೆ. ಹೋರಾಟ ಮಾಡಲು ಎಷ್ಟೋ ವಿಚಾರಗಳು ಇವೆ. ಗಣಪತಿ ಸಾವಿನ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದು ತಿಳಿಸಿದರು.  ಮುಜರಾಯಿ ಇಲಾಖೆ ವತಿಯಿಂದ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡಲಾಗುತ್ತಿದೆ. ಇಲಾಖೆಗೆ ಹರಿದು ಬರುವ ಹಣವನ್ನು ಬೇರೆ ಸಮುದಾಯಕ್ಕೆ ನೀಡಿಲ್ಲ. ಈ ಬಗ್ಗೆ ಸೆಷನ್‍ನಲ್ಲಿ ಸ್ಪಷ್ಟಪಡಿಸಿದ್ದೇನೆ. ಎಲ್ಲಿಯೂ ಈ ಹಣ ದುರುಪಯೋಗವಾಗಿಲ್ಲ ಎಂದು ತಿಳಿಸಿದರು.

Facebook Comments

Sri Raghav

Admin