ಜಿಎಸ್‍ಟಿ ವಿರುದ್ಧ ದೇಶದ ಹಲವೆಡೆ ಭಾರೀ ಪ್ರತಿಭಟನೆ, ರೈಲು ತಡೆ, ಬಂದ್

ಈ ಸುದ್ದಿಯನ್ನು ಶೇರ್ ಮಾಡಿ

Protest--01

ನವದೆಹಲಿ/ಮುಂಬೈ/ಕಾನ್ಪುರ, ಜು.1-ಇಂದಿನಿಂದ ದೇಶಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವೆಗಳ ತೆರಿಗೆ (ಜಿಎಸ್‍ಟಿ) ಪದ್ದತಿ ವಿರೋಧಿಸಿ ದೇಶದ ವಿವಿಧ ನಗರಗಳಲ್ಲಿ ಭಾರೀ ಪ್ರತಿಭಟನೆ ವ್ಯಕ್ತವಾಗುತ್ತಿದೆ.   ಈ ತೆರಿಗೆ ವ್ಯವಸ್ಥೆಯಿಂದ ವ್ಯಾಪಾರಿಗಳಿಗೆ ನಷ್ಟವಾಗಲಿದ್ದು, ವಹಿವಾಟಿಗೆ ಧಕ್ಕೆಯಾಗಲಿದೆ ಎಂದು ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತರಪ್ರದೇಶ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಜಮ್ಮು-ಕಾಶ್ಮೀರ ಸೇರಿದಂತೆ ಕೆಲವು ರಾಜ್ಯಗಳಲ್ಲಿನ ಪ್ರಮುಖ ನಗರಗಳಲ್ಲಿ ಏಕರೂಪದ ತೆರಿಗೆ ವಿರೋಧಿಸಿ ವರ್ತಕರು ಪ್ರತಿಭಟನೆ ನಡೆಸಿದ್ದಾರೆ.  ಉತ್ತರಪ್ರದೇಶದ ವ್ಯಾಪಾರ ಕೇಂದ್ರ ಎಂದೇ ಗುರುತಿಸಿಕೊಂಡಿರುವ ಕಾನ್ಪುರದಲ್ಲಿ ವ್ಯಾಪಾ ರಸ್ಥರು ರೈಲು ಹಳಿ ಮೇಲೆ ಕುಳಿತು  ಕಾನ್ಪುರ-ಪ್ರತಾಪ್‍ಗಢ್ ರೈಲು ಸಂಚಾರಕ್ಕೆ ತಡೆಯೊಡ್ಡಿದರು.

ಅಖಿಲ ಭಾರತೀಯ ಉದ್ಯೋಗ್ ವ್ಯಾಪಾರ್ ಮಂಡಲ್ ಮುಖಂಡ ಜ್ಞಾನೇಂದ್ರ ಮಿಶ್ರಾ ನೇತೃತ್ವದಲ್ಲಿ ಅನೇಕ ವರ್ತಕರು ಮತ್ತು ವ್ಯಾಪಾರಿಗಳು ಲಕ್ನೋ ರೈಲ್ವೆ ಕ್ರಾಸಿಂಗ್‍ನಲ್ಲಿ ಪ್ರತಿಭಟನೆ ನಡೆಸಿ, ಸ್ಥಳೀಯ ರೈಲುಗಳ ಸಂಚಾರಕ್ಕೆ ತಡೆಯೊಡ್ಡಿದರು. ರೈಲ್ವೆ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಾಕಾರರನ್ನು ತೆರವುಗೊಳಿಸಿದರು.

ಕಾನ್ಪುರದ ಮಾರುಕಟ್ಟೆ ಪ್ರದೇಶದಲ್ಲಿ ವ್ಯಾಪಾರಿಗಳು ಸಗಟು ಮತ್ತು ಚಿಲ್ಲರೆ ಅಂಗಡಿಗಳನ್ನು ಮುಚ್ಚಿ ಪ್ರತಿಭಟನೆ ಮೆರವಣಿಗೆ ನಡೆಸಿದರು.
ಪಶ್ಚಿಮ ಬಂಗಾಳದಲ್ಲಿ ಭಾರತೀಯ ಉದ್ಯೋಗ್ ವ್ಯಾಪಾರ್ ಮಂಡಲ್ ಬಂದ್‍ಗೆ ಕರೆ ನೀಡಲಾಗಿದೆ. ಮಧ್ಯಪ್ರದೇಶದ ಕೆಲವು ಪ್ರಮುಖ ನಗರಗಳಲ್ಲಿ ಜಿಎಸ್‍ಟಿ ವಿರೋಧಿಸಿ ಪ್ರತಿಭಟನೆ ನಡೆದ ಕಾರಣ ಅಂಗಡಿ-ಮುಂಗಟ್ಟುಗಳು ಬಂದ್ ಆಗಿದ್ದವು.   ಜ ಮ್ಮು ಮತ್ತು ಕಾಶ್ಮೀರದಲ್ಲಿ ಜಿಎಸ್‍ಟಿ ವಿರೋಧಿಸಿ ವ್ಯಾಪಾರಿಗಳು ಮತ್ತು ಉತ್ಪಾದಕರ ಸಂಘ ಇಂದು ಸಾರ್ವತ್ರಿಕ ಪ್ರತಿಭಟನೆ ನಡೆಸುತ್ತಿರುವುದರಿಂದ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin