ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

CM-Meeting

ಬೆಂಗಳೂರು, ನ.7- ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ  ಕಾರ್ಯನಿರ್ವಹಣಾಧಿಕಾರಿಗಳು, ಪ್ರಾದೇಶಿಕ ಆಯುಕ್ತರು, ಸರ್ಕಾರಿ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜಿಲ್ಲಾವಾರು ಮಹತ್ವದ ಸಭೆ ನಡೆಸಿದರು. ನವೆಂಬರ್ 13ರಿಂದ ಬೆಳಗಾವಿಯಲ್ಲಿ 10 ದಿನಗಳ ಕಾಲ ಅಧಿವೇಶನ ನಡೆಯಲಿರುವ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಎಲ್ಲ ಹಿರಿಯ ಅಧಿಕಾರಿಗಳೊಂದಿಗೆ ಬಜೆಟ್ ಪ್ರಸ್ತಾಪಿತ ಯೋಜನೆ ಅನುಷ್ಠಾನಗಳು, ಬರ ಪರಿಹಾರ ಕಾಮಗಾರಿಗಳು, ಮಳೆ ಅನಾಹುತ ವಿಷಯಗಳ ಕುರಿತು ಚರ್ಚೆ ನಡೆಸಿದರು.

ಅನ್ನಭಾಗ್ಯ ಯೋಜನೆ, ಗುಡಿಸಲು ಮುಕ್ತ ಕರ್ನಾಟಕ ಯೋಜನೆಗಳ ಕುರಿತು ಜಿಲ್ಲಾವಾರು ಸಭೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಯೋಜನೆ ಅನುಷ್ಠಾನ ಮಾಡುವಲ್ಲಿ ವಿಫಲಗೊಂಡ ಅಧಿಕಾರಿಗಳಿಗೆ ಸ್ಥಳದಲ್ಲೇ ತೀವ್ರ ತರಾಟೆಗೆ ತೆಗೆದುಕೊಂಡರು. ರಾಜ್ಯದಲ್ಲಿ ಸರ್ಕಾರದ ಯೋಜನೆಗಳ ಸಾಧಕ-ಬಾಧಕಗಳ ಮಾಹಿತಿಗಳನ್ನು ಅಧಿಕಾರಿಗಳಿಂದ ಕಲೆ ಹಾಕಿದರು. ಸತತ ಬರದಿಂದ ಉಂಟಾಗಿದ್ದ ಅನಾಹುತಗಳು, ಕೈಗೊಂಡ ಪರಿಹಾರ ಕಾಮಗಾರಿಗಳು, ನಂತರ ಬಂದ ಮಳೆ, ಅದರಿಂದಾದ ಅನಾಹುತಗಳು ಹಾಗೂ ಕೈಗೊಂಡ ಪರಿಹಾರ ಕಾಮಗಾರಿಗಳ ಬಗ್ಗೆ ಸೂಕ್ತ ಮಾಹಿತಿಯನ್ನು ಅಧಿಕಾರಿಗಳಿಂದ ಮುಖ್ಯಮಂತ್ರಿಗಳು ಜಿಲ್ಲಾವಾರು ಮಾಹಿತಿ ಪಡೆದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin