ಜಿಲ್ಲಾ ಸತ್ರ ನ್ಯಾಯಾಧೀಶರ ಮನೆಗಗೇ ನುಗ್ಗಿದ ನೀರು

ಈ ಸುದ್ದಿಯನ್ನು ಶೇರ್ ಮಾಡಿ

Bidar

ಬೀದರ್, ಸೆ.23- ನಗರದಲ್ಲಿ ಕಳೆದ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಜಿಲ್ಲಾ ನ್ಯಾಯಾಧೀಶರ ಮನೆಗೂ ನೀರು ನುಗ್ಗಿದ್ದ ಹಿನ್ನೆಲೆಯಲ್ಲಿ ನಗರಸಭೆ ಅಧಿಕಾರಿಗಳು ಭೀತಿಗೊಂಡಿದ್ದಾರೆ. ಮೂಲಭೂತ ಸೌಲಭ್ಯಗಳನ್ನು ಸರಿಯಾಗಿ ಕಲ್ಪಿಸದ ಹಿನ್ನೆಲೆಯಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಅರೆಸ್ಟ್ ವಾರೆಂಟ್ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ. ನಗರಸಭೆ ಆಯುಕ್ತ ಶಕೀಲ್, ಪಿಡಬ್ಲ್ಯುಡಿ ಎಂಜಿನಿಯರ್ ಮಳ್ಳಿ, ಎಇ ಶಿವರಾಜ್ ಪಾಟೀಲ್, ಎಇಇ ಇಂಜಿನಿಯರ್ ಇನ್ನಿತರ ಅಧಿಕಾರಿಗಳು ಬಂಧನ ಭೀತಿಯಿಲ್ಲಿದ್ದಾರೆ. ನ್ಯಾಯಾಧೀಶರ ಮನೆಯಲ್ಲಿ ಪೀಠೋಪಕರಣಗಳು, ಕೆಲವು ಕಾಗದ ಪತ್ರಗಳು ನೀರಿನಲ್ಲಿ ತೇಲುತ್ತಿದೆ. ತಗ್ಗು ಪ್ರದೇಶಗಳಿಗೆ ಮನೆಗಳಿಗೂ ನೀರು ನುಗ್ಗಿ ಜನರು ಅತಂತ್ರ ಪರಿಸ್ಥಿತಿಯಲ್ಲಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin