ಜು.17 ರಿಂದ ಆ.11ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ

ಈ ಸುದ್ದಿಯನ್ನು ಶೇರ್ ಮಾಡಿ

Parliament

ನವದೆಹಲಿ, ಜೂ. 24-ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 17ರಿಂದ ಆರಂಭವಾಗಲಿದೆ. ರಾಷ್ಟ್ರಪತಿ ಚುನಾವಣೆ ಮತದಾನ ನಡೆಯುವ ದಿನದಿಂದ ಆರಂಭವಾಗುವ ಮಾನ್ಸೂನ್ ಅಧಿವೇಶನ ಆ.11ರವರೆಗೆ ನಡೆಯಲಿದೆ.  ಜು.17 ರಿಂದ ಆ.11ರವರೆಗೆ ಮುಂಗಾರು ಅಧಿವೇಶನ ನಡೆಸುವಂತೆ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಪಿಎ) ಶಿಫಾರಸು ಮಾಡಿದೆ ಎಂದು ಸಮಿತಿಯಲ್ಲಿನ ಮೂಲಗಳು ತಿಳಿಸಿವೆ. ರಾಷ್ಟ್ರಪತಿ ಹುದ್ದೆಗೆ ಎನ್‍ಡಿಎ ಅಭ್ಯರ್ಥಿಯಾಗಿ ರಾಮನಾಥ್ ಕೋವಿಂದ್ ನಿನ್ನೆ ತಮ್ಮ ನಾಮಪತ್ರ ಸಲ್ಲಿಸಿದ ನಂತರ ಸಂಜೆ ಗೃಹ ಸಚಿವ ರಾಜ್‍ನಾಥ್‍ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಿಸಿಪಿಎ ಸಭೆಯಲ್ಲಿ ಈ ಕುರಿತು ಶಿಫಾರಸು ಮಾಡಲಾಗಿದೆ.

ಲೋಕಸಭಾ ಸದಸ್ಯ ವಿನೋದ್‍ಖನ್ನಾ ಮತ್ತು ರಾಜ್ಯಸಭಾ ಸದಸ್ಯೆ ಪಲ್ಲವಿರೆಡ್ಡಿ ಅವರ ನಿಧನದಿಂದಾಗಿ ಸಂಸತ್ತಿನ ಉಭಯ ಸದನಗಳು ಮೊದಲ ದಿನ ಶ್ರದ್ಧಾಂಜಲಿ ಸಲ್ಲಿಸಿ ಕಲಾಪ ನಡೆಸುವುದಿಲ್ಲ.   ಮುಂಗಾರು ಅಧಿವೇಶನದಲ್ಲಿ ಕಾಶ್ಮೀರ ಕಣಿವೆಯಲ್ಲಿ ಹೆಚ್ಚುತ್ತಿರುವ ಉಗ್ರರ ದಾಳಿ, ಮಧ್ಯಪ್ರದೇಶದಲ್ಲಿ ರೈತರ ಮೇಲೆ ನಡೆದ ಗೋಲಿಬಾರ್, ವಿವಿಧ ರಾಜ್ಯಗಳ ಕೃಷಿ ಸಾಲ ಮನ್ನಾ ಸೇರಿದಂತೆ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದ್ದು, ಆಡಳಿತಾರೂಢ ಎನ್‍ಡಿಎಗೆ ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin