ಜೂನ್ 14ಕ್ಕೆ ಕಿಚ್ಚನ ವಿಚ್ಛೇದನ ಪ್ರಕರಣದ ಅಂತಿಮ ವಿಚಾರಣೆ
ಈ ಸುದ್ದಿಯನ್ನು ಶೇರ್ ಮಾಡಿ
ಬೆಂಗಳೂರು, ಮಾ.9– ಕಿಚ್ಚ ಸುದೀಪ್ ಅವರ ವೈವಾಹಿಕ ಜೀವನದಲ್ಲಿ ಎದ್ದಿದ್ದ ವಿಚ್ಛೇದನ ಪ್ರಕರಣದ ಅಂತಿಮ ವಿಚಾರಣೆಯನ್ನು ಜೂನ್ 14ಕ್ಕೆ ಮುಂದೂಡಿದೆ. 2015ರ ಸೆಪ್ಟೆಂಬರ್ನಲ್ಲಿ ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದಂತೆ ಸುದೀಪ್ ಹಾಗೂ ಪ್ರಿಯಾ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಅಂದಿನಿಂದಲೂ ಈ ವಿಚಾರವಾಗಿ ಈ ಇಬ್ಬರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ.
ಇಂದು ಈ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ಜೂನ್ 14ರಂದು ತಪ್ಪದೇ ಹಾಜರಾಗಬೇಕು ಇದು ಕೊನೆಯ ಅವಕಾಶವೆಂದು ಕೌಟುಂಬಿಕ ನ್ಯಾಯಾಲಯ ಸೂಚಿಸಿದೆ.
ಒಂದು ವೇಳೆ ನ್ಯಾಯಾಲಯಕ್ಕೆ ಹಾಜರಾಗದಿದ್ದರೆ ಈ ಕುರಿತು ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ಕೋರ್ಟ್ಗೆ ಇದೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments