ಜೆಡಿಎಸ್‍ಗೆ ಅಸಾದುದ್ದೀನ್ ಒವೈಸಿ ಬೆಂಬಲ

ಈ ಸುದ್ದಿಯನ್ನು ಶೇರ್ ಮಾಡಿ

Owisi--01

ಬೆಂಗಳೂರು, ಏ.16- ಕರ್ನಾಟಕದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯೇತರ ಸರ್ಕಾರ ರಚನೆಯಾಗಬೇಕೆಂದು ಎಐಎಂಐಎಂ ಜೆಡಿಎಸ್‍ಗೆ ಬೆಂಬಲಿಸಲು ನಿರ್ಧರಿಸಿದೆ. ಎಐಎಂಐಎಂನ ಅಸಾದುದ್ದೀನ್ ಒವೈಸಿ ಜೆಡಿಎಸ್‍ಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿ ಜೆಡಿಎಸ್‍ನ ಕುಮಾರಸ್ವಾಮಿಯವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಗುಣಮಟ್ಟದ ಅಭಿವೃದ್ಧಿಗಾಗಿ ಶ್ರಮಿಸುವ ನಾವು ಜೆಡಿಎಸ್‍ಗೆ ಬೆಂಬಲಿಸುತ್ತೇವೆ. ಆದರೆ ಯಾವುದೇ ಷರತ್ತುಗಳನ್ನು ಹಾಕಿಲ್ಲ. ನಮ್ಮ ಪಕ್ಷದಿಂದ ಕರ್ನಾಟಕದಲ್ಲಿ ಯಾವುದೇ ಅಭ್ಯರ್ಥಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. 2 ರಾಷ್ಟ್ರೀಯ ಪಕ್ಷಗಳು ಕರ್ನಾಟಕ ಅಭಿವೃದ್ಧಿ ಕಾರ್ಯದಲ್ಲಿ ವಿಫಲವಾಗಿವೆ.

ಆದ್ದರಿಂದ ತಾವು ಜೆಡಿಎಸ್‍ಗೆ ಬೆಂಬಲ ಸೂಚಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಈಗಾಗಲೇ ಬಿಎಸ್‍ಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಕೆಲವು ಕ್ಷೇತ್ರಗಳಲ್ಲಿ ಬಿಎಸ್‍ಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಇತ್ತೀಚೆಗಷ್ಟೇ ತೆಲಂಗಾಣದ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರರಾವ್ ಜೆಡಿಎಸ್ ವರಿಷ್ಠ ದೇವೇಗೌಡರನ್ನು ಭೇಟಿ ಮಾಡಿ ಬೆಂಬಲ ವ್ಯಕ್ತಪಡಿಸಿದ್ದನ್ನು ಸ್ಮರಿಸಬಹುದು.

Facebook Comments

Sri Raghav

Admin