ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ನಾಳೆ ಚುನಾವಣೆ : ದೇವೇಗೌಡರು-ಕುಮಾರಸ್ವಾಮಿ ಪುನರಾಯ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

JDS-01

ಬೆಂಗಳೂರು, ಡಿ.8- ಜೆಡಿಎಸ್ ರಾಷ್ಟ್ರೀಯ ಹಾಗೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದೆ. ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ನಿಗದಿಪಡಿಸಿದ್ದ ಗಡುವು ಈಗಾಗಲೇ ಮುಕ್ತಾಯವಾಗಿದೆ. ನಗರದ ಅರಮನೆ ಮೈದಾನದಲ್ಲಿ ಇಂದು ಮತ್ತು ನಾಳೆ ಜೆಡಿಎಸ್‍ನ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ನಾಳೆ ನಡೆಯುವ ರಾಷ್ಟ್ರೀಯ ಪರಿಷತ್ ಸಭೆಯಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ.  ಬಹುತೇಕ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪುನರಾಯ್ಕೆಯಾಗಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಕೂಡ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮರು ಆಯ್ಕೆಯಾಗಲಿದ್ದಾರೆ.

ಇಂದು ಸಂಜೆ ದೇವೇಗೌಡರ ಅಧ್ಯಕ್ಷತೆಯಲ್ಲಿ ಕಾರ್ಯಕಾರಿಣಿ ಸಭೆ ಆರಂಭಗೊಂಡಿತು. ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಆಲಿ ಸೇರಿದಂತೆ ವಿವಿಧ ರಾಜ್ಯಗಳ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು. ಇಂದು ಸಂಜೆ ನಿರ್ಗಮಿಸುತ್ತಿರುವ 75 ಸದಸ್ಯರನ್ನೊಳಗೊಂಡ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಯಿತು. ನಾಳೆ ಬೆಳಗ್ಗೆ 10 ಗಂಟೆಗೆ 360 ಮಂದಿ ಪ್ರತಿನಿಧಿಗಳು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಜ್ಯಾಧ್ಯಕ್ಷರಾಗಿ ಎಚ್.ಡಿ.ಕುಮಾರಸ್ವಾಮಿ ಮರು ಆಯ್ಕೆಯಾಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ನಡೆಯುವ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರಾಗಿ ಎಚ್.ಡಿ.ದೇವೇಗೌಡರು ಆಯ್ಕೆಯಾಗಲಿದ್ದಾರೆ.
ನಂತರ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪ್ರಚಲಿತ ರಾಜಕೀಯ, ರಾಜ್ಯ ಮತ್ತು ರಾಷ್ಟ್ರ ಎದುರಿಸುತ್ತಿರುವ ಪ್ರಸ್ತುತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಇದಕ್ಕೆ ಪೂರಕವಾಗಿ ರಾಜಕೀಯ ನಿರ್ಣಯಗಳನ್ನು ಅಂಗೀಕರಿಸಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin