ಜೆಡಿಎಸ್ ಕಾರ್ಯಕರ್ತರ ಕೊಲೆ ಹಿನ್ನೆಲೆ ನಾಳೆ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

jds
ಮಂಡ್ಯ, ಜ.3- ಜಿಲ್ಲೆಯಲ್ಲಿ ಹೆಚ್ಚುತ್ತಿರುವ ರಾಜಕೀಯ ವೈಷಮ್ಯದ ಸರಣಿ ಕೊಲೆಗಳನ್ನು ಖಂಡಿಸಿ ನಾಳೆ ಬೆಳಗ್ಗೆ ಸಂಸದ  ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಘಟಕದ ಜೆಡಿಎಸ್ ಅಧ್ಯಕ್ಷ ತಿಮ್ಮೇಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಸಂಜಯ್ ವೃತ್ತದಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲಾ ಶಾಸಕರು, ಜಿಪಂ, ತಾಪಂ, ಗ್ರಾಪಂ ಸದಸ್ಯರು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.ನಮ್ಮ ಪಕ್ಷದ ಕಾರ್ಯಕರ್ತರಾದ ಬೆನ್ನಮನಹಳ್ಳಿ ಕುಮಾರ್, ತೊಪ್ಪನಹಳ್ಳಿ ರಾಜೇಶ್, ಮುತ್ತುರಾಜ್, ಮರುಕನಹಳ್ಳಿ ಹರೀಶ್ ಎಂಬುವರನ್ನು ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ಇದನ್ನೆಲ್ಲಾ ಖಂಡಿಸಿ ನಾಳೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಜಿಯಾವುಲ್ಲಾ ಅವರಿಗೆ ಮನವಿ ಪತ್ರ ಸಲ್ಲಿಸುವುದಾಗಿ ತಿಳಿಸಿದರು.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin