ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಎಚ್‍ಡಿಕೆ ಆಯ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

JDS-Meeting--01

ಬೆಂಗಳೂರು, ಮೇ16-ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನಾಗಿ ಮತ್ತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ. ಇಂದು ಖಾಸಗಿ ಹೋಟೆಲ್‍ನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಶಾಸಕಾಂಗ ಪಕ್ಷದ ಸಭೆಯ ನಂತರ ಕಾಂಗ್ರೆಸ್ ಪಕ್ಷದ ಬೆಂಬಲದೊಂದಿಗೆ ಸರ್ಕಾರ ರಚಿಸುವ ಹಕ್ಕು ಮಂಡನೆ ಮಾಡಲು ನಿರ್ಧರಿಸಲಾಯಿತು.

ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‍ನಿಂದ ಸ್ಪರ್ಧಿಸಿ ಚುನಾಯಿತ ಸದಸ್ಯರು, ರಾಜ್ಯಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯರು, ಶಾಸಕಾಂಗ ಪಕ್ಷದ ಸಭೆಯಲ್ಲಿ ಹಾಜರಿದ್ದರು. ರಾಜ್ಯದಲ್ಲಿ ಯಾವ ಪಕ್ಷಕ್ಕೆ ಬಹುಮತ ದೊರೆಯದಿರುವ ಹಿನ್ನೆಲೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ರಚನೆ ಮಾಡುವ ಪ್ರಯತ್ನಗಳು ನಡೆಯುತ್ತಿರುವುದರಿಂದ ಚುನಾಯಿತರಾಗಿರುವ ಎಲ್ಲ ಅಭ್ಯರ್ಥಿಗಳು ಒಗ್ಗಟ್ಟಿನಿಂದ ಇರಬೇಕು. ಆಪರೇಷನ್ ಕಮಲ ಮಾಡುವ ಸೂಚನೆಗಳಿದ್ದು ಪ್ರತಿಯೊಬ್ಬರು ಜಾಗೃತರಾಗಿರಬೇಕು. ಯಾವುದೇ ಕಾರಣಕ್ಕೆ ಬಿಜೆಪಿ ಒಡ್ಡುವ ಆಮಿಷಗಳಿಗೆ ಬಲಿಯಾಗಬಾರದು ಎಂಬ ನಿರ್ದೇಶನವನ್ನು ಜೆಡಿಎಸ್ ಪಕ್ಷದ ವರಿಷ್ಠರು ನೀಡಿದ್ದಾರೆ.

Facebook Comments

Sri Raghav

Admin