ಜೆಡಿಎಸ್ ಸೇರಲ್ಲ ಯೋಗೇಶ್ವರ್ ಸ್ಪಷ್ಟನೆ

ಈ ಸುದ್ದಿಯನ್ನು ಶೇರ್ ಮಾಡಿ

cp
ರಾಮನಗರ, ಆ.24- ತಾವು ಜೆಡಿಎಸ್ ಸೇರಿದಂತೆ ಸದ್ಯಕ್ಕೆ ಯಾವುದೇ ಪಕ್ಷ ಸೇರುವುದಿಲ್ಲ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯಲ್ಲಿ ಯೋಗೇಶ್ವರ್ ಜೆಡಿಎಸ್ ಸೇರಲಿದ್ದಾರೆ ಎಂಬ ವದಂತಿ ಹರಡಿದ್ದು, ಇದು ಆಧಾರ ರಹಿತವಾಗಿದೆ ಹಾಗೂ ಊಹಾಪೋಹದಿಂದ ಕೂಡಿದೆ ಎಂದು ಅವರು ತಿಳಿಸಿದ್ದಾರೆ. ಇನ್ನು ಎರಡು ವರ್ಷಗಳ ಕಾಲ ಆಡಳಿತಾರೂಢ ಕಾಂಗ್ರೆಸ್‌ನಲ್ಲೇ ಇರುವುದಾಗಿ ತಿಳಿಸಿದ ಅವರು, ತಮ್ಮ ಸಹೋದರ ಸಿ.ಪಿ.ರಾಜೇಶ್ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಅವರ ಸಹಕಾರದಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಪರಿಸ್ಥಿತಿ ಹೀಗಿರುವಾಗ ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷ ಸೇರುವ ಯೋಚನೆ ಮಾಡಿಲ್ಲ ಎಂದು ಜೆಡಿಎಸ್ ಸೇರಲಿದ್ದಾರೆ ಎಂಬ ವದಂತಿಗೆ ತೆರೆ ಎಳೆದಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin