ಜೆಡಿಎಸ್ ಸೇರುವ ಕುರಿತು ಸಿ.ಪಿ.ಯೋಗೇಶ್ವರ್ ನನ್ನೊಂದಿಗೆ ಚರ್ಚಿಸಿಲ್ಲ : ಗೌಡರು

ಈ ಸುದ್ದಿಯನ್ನು ಶೇರ್ ಮಾಡಿ

Devegowda--01

ಬೆಂಗಳೂರು, ಅ.13- ಸಿ.ಪಿ.ಯೋಗೇಶ್ವರ್ ಜೆಡಿಎಸ್ ಸೇರುವ ಸಂಬಂಧ ಈವರೆಗೂ ತಮ್ಮೊಂದಿಗೆ ಯಾವುದೇ ಚರ್ಚೆ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ್‍ಸ್ವಾಮಿ ಹೇಳಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಇಂತಹ ವದಂತಿಗಳು ಸಾಮಾನ್ಯವಾಗಿರುತ್ತವೆ. ಆದರೆ ಈವರೆಗೂ ಯೋಗೇಶ್ವರ್ ತಮ್ಮೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ. ಅಂತಹ ಸಂದರ್ಭ ಬಂದರೆ ಚರ್ಚೆ ಮಾಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದರು.

ಸದ್ಯಕ್ಕೆ ಯೋಗೇಶ್ವರ್ ಅವರು ಕಾಂಗ್ರೆಸ್‍ನಲ್ಲಿದ್ದಾರೆ. ಮೊದಲು ಅವರು ಜೆಡಿಎಸ್ ಸೇರುವ ಸಂಬಂಧ ಪಕ್ಷದ ಮುಖಂಡರ ಜೊತೆ ಚರ್ಚೆ ನಡೆಸಲಿ. ನಂತರ ಪ್ರತಿಕ್ರಿಯೆ ಕೊಡುವುದು ಸೂಕ್ತ ಎಂದರು. ಯೋಗೇಶ್ವರ್ ಕಾಂಗ್ರೆಸ್ ಸಂಬಂಧ ಕಡಿದುಕೊಂಡು ಜೆಡಿಎಸ್ ಸೇರಲಿದ್ದಾರೆ ಎಂಬ ವದಂತಿಗಳು ವ್ಯಾಪಕವಾಗಿದ್ದವು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin