ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಕೈದಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Dead-Body--01

ಕೆಜಿಎಫ್, ಜ.6- ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಕೈದಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿರುವ ಘಟನೆ ತಾಲೂಕಿನ ಉಪ ಕಾರಾಗೃಹದಲ್ಲಿ ನಡೆದಿದೆ. ಕೆಜಿಎಫ್ ರಾಬರ್ಟ್‍ಸನ್ ಪೇಟೆ ನಿವಾಸಿ ಸಂಪತ್‍ಕುಮಾರ್ (42) ಮೃತ ವ್ಯಕ್ತಿ. ಕಳವು ಪ್ರಕರಣಗಳಲ್ಲಿ ಬಂಧನವಾಗಿ ಜೈಲು ಸೇರಿದ್ದ ಈತ ಕಳೆದ ಜ.4ರಂದು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದನು. ತಕ್ಷಣ ಜೈಲಿನ ಸಿಬ್ಬಂದಿಗಳು ಆತನನ್ನು ಆಸ್ಪತ್ರೆಗೆ ಸೇರಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಕೆಜಿಎಫ್ ಚಾಂಪಿಯನ್ ರೀಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Facebook Comments

Sri Raghav

Admin