ಟಯರ್ ಸ್ಫೋಟಗೊಂಡು ಡಿವೈಡರ್‍ಗೆ ಡಿಕ್ಕಿ ಹೊಡೆದ ಖಾಸಗಿ ಸುದ್ದಿ ವಾಹಿನಿಯ ಒಬಿ ವ್ಯಾನ್‍

ಈ ಸುದ್ದಿಯನ್ನು ಶೇರ್ ಮಾಡಿ

News-198

ತುಮಕೂರು, ಫೆ.12- ಖಾಸಗಿ ಸುದ್ದಿ ವಾಹಿನಿಯ ಒಬಿ ವ್ಯಾನ್‍ನ ಟಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‍ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹನುಮಂತಪುರ ಸೇತುವೆ ಬಳಿ ಇಂದು ಬೆಳಗ್ಗೆ ನಡೆದಿದೆ. ಹೊಸಪೇಟೆಯಲ್ಲಿ ನಡೆದ ರಾಹುಲ್ ಗಾಂಧಿ ಅವರ ಕಾರ್ಯಕ್ರಮ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾಗ ಹನುಮಂತಪುರ ಸೇತುವೆ ಬಳಿ ಟಯರ್ ಸ್ಫೋಟಗೊಂಡು ಡಿವೈಡರ್‍ಗೆ ಡಿಕ್ಕಿ ಹೊಡೆದು ಚಾಲಕ ಸೇರಿದಂತೆ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ.ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ನಗರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Facebook Comments

Sri Raghav

Admin