ಟಿಪ್ಪು ಜಯಂತಿ ಆಚರಿಸದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕೊಡವರ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

Tippu--Jayanti

ಬೆಂಗಳೂರು,ನ.4-ರಾಜ್ಯ ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ ಮಾಡಬಾರದೆಂದು ಕೊಡವರ ನಿಯೋಗ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿತು.  ಟಿಪ್ಪು ಜಯಂತಿ ಆಚರಣೆ ಮಾಡಬಾರದು ಎಂದು ಹೈಕೋರ್ಟ್ ಮೆಟ್ಟಿಲೇರಿದ ಕೆ.ಪಿ.ಮಂಜುನಾಥ್ ನೇತೃತ್ವದ ನಿಯೋಗ ವಿಧಾನಸೌಧದಲ್ಲಿ ಸರ್ಕಾರದ ಮುಖ್ಯ ಕಾಯದರ್ಶಿ ಸುಭಾಷ್‍ಚಂದ್ರ ಕುಂಟಿಯ ಅವರಿಗೆ ಮನವಿ ಸಲ್ಲಿಸಿತು.  ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಂಜುನಾಥ್, ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರನಲ್ಲ ಶಾಂತಿಪ್ರಿಯ ಕೊಡಗಿನಲ್ಲಿ ಕಳೆದ ಬಾರಿ ಟಿಪ್ಪು ಜಯಂತಿ ಆಚರಣೆಯಿಂದಾಗಿ ಇಬ್ಬರ ಜೀವ ಬಲಿಯಾಗಿದೆ. ಕೊಡವರನ್ನು ಗೆಲ್ಲಲಾಗದ ಟಿಪ್ಪು ಮೋಸದಿಂದ 80 ಸಾವಿರ ಕೊಡವರನ್ನು ಹತ್ಯೆಗೈದ ದುಷ್ಟ ರಾಜನಾಗಿದ್ದು, ಆತನ ಜಯಂತಿ ಆಚರಣೆಯನ್ನು ಮಾಡಬಾರದು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಸಾಕಷ್ಟು ಮಂದಿ ಸ್ವಾತಂತ್ರ್ಯ ಹೋರಾಟಗಾರರಿದ್ದಾರೆ. ಅಲ್ಲದೆ ಯಾವುದೇ ಜಯಂತಿ ಆಚರಣೆಗೆ ಸಾರ್ವಜನಿಕರ ಹಣ ಬಳಕೆ ಮಾಡಬಾರದು ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದ್ದರೂ ರಾಜ್ಯ ಸರ್ಕಾರ ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಆಚರಣೆ ಮಾಡಲು ಮುಂದಾಗಿದೆ. ಇದರ ವಿರುದ್ಧ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ. ಮುಖ್ಯ ಕಾರ್ಯದರ್ಶಿಗಳು ತಮ್ಮ ಮನವಿಯನ್ನು ಆಲಿಸಿದ್ದು , ನಿಷೇಧಿಸುವ ವಿಶ್ವಾಸವಿದೆ ಎಂದರು.

► Follow us on –  Facebook / Twitter  / Google+

Facebook Comments

Sri Raghav

Admin