ಟಿಪ್ಪು ಜಯಂತಿ ಹಿನ್ನೆಲೆ 20 ಜನರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

tippu

ಚಿತ್ರದುರ್ಗ,ನ.07- ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಕ್ರಮ ಕೈಗೊಂಡಿರುವ ಜಿಲ್ಲಾಡಳಿತ ಇಂದು ಬೆಳಗ್ಗೆ 6 ಗಂಟೆಯಿಂದ ನ.10ರ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮುಂಜಾಗ್ರತ ಕ್ರಮವಾಗಿ ಹಿಂದುಪರ ಸಂಘಟನೆಗಳಿಗೆ ಸೇರಿದ 20ಕ್ಕೂ ಹೆಚ್ಚುಮಂದಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಶ್ರೀನಾಥ್ ಎಂ.ಜೋಶಿ ತಿಳಿಸಿದ್ದಾರೆ. ನ.10ರಂದು ಇಲ್ಲಿನ ಹಳೆಯ ಮಾಧ್ಯಮಿಕ ಶಾಲೆಯ ಆವರಣದಲ್ಲಿ ಟಿಪ್ಪು ಜಯಂತಿಯ ಕಾರ್ಯಕ್ರಮ ನಡೆಯಲಿದ್ದು, ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಹಿಂದುಪರ ಸಂಘಟನೆಗಳ ಮುಖಂಡರಾದ ವಿರೇಂದ್ರ, ದುರ್ಗ ಪ್ರಸಾದ್, ಅಂಜನಿ, ಪವನ್ ಸೇರಿದಂತೆ 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರು ಎಸ್ಪಿಗಳು, 8 ಜನ ಡಿವೈಎಸ್‍ಪಿಗಳು, ನಾಲ್ಕು ಕೆಎಸ್‍ಆರ್‍ಪಿ ತುಕಡಿಗಳು ಸೇರಿದಂತೆ ಒಂದೂವರೆ ಸಾವಿರ ಸಿಬ್ಬಂದಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಸರ್ಪಗಾವಲು ಏರ್ಪಡಿಸಲಾಗಿದೆ. ಗುಪ್ತಚಾರ ಇಲಾಖೆಯ ಮಾಹಿತಿಯ ಮೇರೆಗೆ ಈ ಕ್ರಮಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಆದರೆ ಬಸ್ ನಿಲ್ದಾಣ, ರೈಲು ನಿಲ್ದಾಣ, ಆಸ್ಪತ್ರೆಗಳು, ಶವ ಯಾತ್ರೆ ಮುಂತಾದ ವಿಷಯಗಳಿಗೆ ಈ ನಿಷೇಧಾಜ್ಞೆ ಅನ್ವಯವಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

Facebook Comments

Sri Raghav

Admin