ಟಿ.ಬಿ.ಜಯಚಂದ್ರ ಹಾಗೂ ಮುದ್ದ ಹನುಮೇಗೌಡರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು (Video)

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಮೇ 9- ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಹಾಗೂ ಸಂಸದ ಮುದ್ದ ಹನುಮೇಗೌಡ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಪ್ರಸಂಗ ಚಿಕ್ಕನಾಯಕನಹಳ್ಳಿಯ ಸಾಸಲು ಗ್ರಾಮದಲ್ಲಿ ನಡೆದಿದೆ.  ನಿನ್ನೆ ಜಯಚಂದ್ರ ಅವರು ಮಗನ ಪರ ಸಾಸಲು ಗ್ರಾಮಕ್ಕೆ ಆಗಮಿಸಿದಾಗ ಘೇರಾವ್ ಹಾಕಿದ ಗ್ರಾಮಸ್ಥರು ಸಾಸಲು ಸತೀಶ್ ಅವರಿಗೆ ಟಿಕೆಟ್ ತಪ್ಪಿಸಿ ಪುತ್ರ ಸಂತೋಷ್ ಜಯಚಂದ್ರ ಅವರಿಗೆ ಟಿಕೆಟ್ ಕೊಡಿಸಿರುವುದಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡರು. ಕಾಂಗ್ರೆಸ್ ನೆಲ ಕಚ್ಚಿದ ಕ್ಷೇತ್ರದಲ್ಲಿ ಮತ್ತೆ ಹೋರಾಡಿ ಮುಂಚೂಣಿಗೆ ತಂದಿದ್ದ ಸಾಸಲು ಸತೀಶ್ ಅವರಿಗೆ ಟಿಕೆಟ್ ಕೊಡಿಸದೆ ಮಗನಿಗೆ ಕೊಡಿಸಿದ್ದೀರಾ ಎಂದು ಗ್ರಾಮಸ್ಥರು ಪ್ರಶ್ನಿಸಿದಾಗ ಉತ್ತರಿಸಲಾಗದೆ ಸಚಿವರು ತಬ್ಬಿಬ್ಬಾದರು.

Jayachadnra

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin