ಟೈರ್ ಸಿಡಿದು ಹಳ್ಳಕ್ಕೆ ಇಳಿದ ಕೆಎಸ್‌ಆರ್‌ಟಿಸಿ ಬಸ್, ಪ್ರಯಾಣಿಕರು ಪಾರು

ಈ ಸುದ್ದಿಯನ್ನು ಶೇರ್ ಮಾಡಿ

KSRTC-01

ಬಾಗೇಪಲ್ಲಿ, ಮಾ.4-ಕೆಎಸ್‌ಆರ್‌ಟಿಸಿ ಬಸ್ ಅಪಘಾತದಲ್ಲಿ ಬಸ್ ಚಾಲಕ ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಎನ್.ಎಚ್.7.ರ ಪಾಲಿಟೆಕ್ನಿಕ್ ಕಾಲೇಜು ಮುಂಭಾಗ ಕೆಎಸ್‍ಅರ್‍ಟಿಸಿ ಬಸ್ ಅಪಘಾತವಾಗಿ ರಸ್ತೆ ಬದಿಯ ಹಳ್ಳಕ್ಕೆ ಉರುಳಿದ ಪರಿಣಾಮ ಈ ಅಪಘಾತ ಸಂಭವಿಸಿದೆ.

ನಿನ್ನೆ ಮಧ್ಯಾಹ್ನ ಚಿಕ್ಕಬಳ್ಳಾಪುರದಿಂದ ಬಾಗೇಪಲ್ಲಿ ಬರುತ್ತಿದ್ದ ಸಮಯದಲ್ಲಿ ಬಸ್‍ನ ಮುಂದಿನ ಚಕ್ರ ಸಿಡಿದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಸ್ ಇಳಿದಾಗ ಬಸ್‍ನಲ್ಲಿದ್ದ ಚಾಲಕ ಮಂಜುನಾಥ್, ಬೆಸ್ಕಾಂ ಜೆ.ಇ.ರವಿಚಂದ್ರ, ನಾರಾಯಣಸ್ವಾಮಿ ಸೇರಿದಂತೆ ಇನ್ನಿತರ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.  ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

Facebook Comments

Sri Raghav

Admin