ಟೈರ್ ಸ್ಫೋಟಗೊಂಡು ಡೀಸೆಲ್ ಟ್ಯಾಂಕರ್ ಪಲ್ಟಿ, ತಪ್ಪಿದ ಅನಾಹುತ

ಈ ಸುದ್ದಿಯನ್ನು ಶೇರ್ ಮಾಡಿ

Diesel-Tanker

ತುಮಕೂರು,ಜ.23-ಡೀಸೆಲ್ ಟ್ಯಾಂಕರ್‍ನ ಟೈರ್ ಸ್ಫೋಟಗೊಂಡ ಪರಿಣಾಮ ಪಲ್ಟಿ ಹೊಡೆದು ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 4ರ ಅಜ್ಜಗೊಂಡನಹಳ್ಳಿ ಸಮೀಪ ಇಂದು ಬೆಳಗ್ಗೆ ಸಂಭವಿಸಿದೆ. ಮಹಾರಾಷ್ಟ್ರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಡೀಸೆಲ್ ಟ್ಯಾಂಕರ್ ಅಜ್ಜಗೊಂಡನಹಳ್ಳಿ ಸಮೀಪ ಟೈರ್ ಸ್ಫೋಟಗೊಂಡು ರಸ್ತೆಗೆ ಅಡ್ಡಲಾಗಿ ಬಿದ್ದಿತು. ಡೀಸೆಲ್ ಸೋರಿಕೆಯಾಗಿದ್ದರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.  ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿ ಒದಗಬಹುದಾದ ಹೆಚ್ಚಿನ ಅನಾಹುತ ತಪ್ಪಿತು.  ಈ ಸಂಬಂಧ ಕೋರಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin