ಟ್ರ್ಯಾಕ್ಟರ್-ಬೈಕ್ ಡಿಕ್ಕಿ : ಸವಾರ ಸಾವು
ಈ ಸುದ್ದಿಯನ್ನು ಶೇರ್ ಮಾಡಿ
ದಾವಣಗೆರೆ, ನ.5-ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ನಡೆದಿದೆ.ಕೆಬಿಜೆ ನಗರದ ನಿವಾಸಿ ಮನೋಹರ್ ಭಾಷಾ (55) ಮೃತಪಟ್ಟ ದುರ್ದೈವಿ.ಎಂದಿನಂತೆ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆ ಸಮೀಪ ಬರುತ್ತಿದ್ದಾಗ ಬೈಕ್ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮನೋಹರ್ ಭಾಷ ಸಾವನ್ನಪ್ಪಿದ್ದಾರೆ.ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಚಾಲಕ ಅರುಣ್ಕುಮಾರ್ನನ್ನು ಬಂಧಿಸಿ ಟ್ರ್ಯಾಕ್ಟರ್ ವಶಪಡಿಸಿಕೊಂಡಿದ್ದಾರೆ.
► Follow us on – Facebook / Twitter / Google+
Facebook Comments