ಡಿಎಂಕೆ ಕಾರ್ಯಾಧ್ಯಕ್ಷರಾಗಿ ಸ್ಟಾಲಿನ್ ಆಯ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

Stalline

ಚೆನ್ನೈ,ಜ.4-ದ್ರಾವಿಡ ಮುನ್ನೆಟ್ರ ಕಳಗಂ(ಡಿಎಂಕೆ) ಪಕ್ಷದ ಖಜಾಂಚಿ ಮತ್ತು ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಎಂ.ಕೆ.ಸ್ಟಾಲಿನ್ ಅವರನ್ನು ಡಿಎಂಕೆ ಕಾರ್ಯಾಧ್ಯಕ್ಷರನ್ನಾಗಿ ಇಂದು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಚೆನ್ನೈನ ಪಕ್ಷದ ಕೇಂದ್ರ ಕಚೇರಿಯಲ್ಲಿ ಇಂದು ಬೆಳಗ್ಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಅನ್ಬಳಗನ್ ಅಧ್ಯಕ್ಷತೆಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ಪಕ್ಷದ ಪರಮೋಚ್ಚ ನಾಯಕ ಡಾ.ಎಂ.ಕೆ.ಕರುಣಾನಿಧಿಯವರ ಪುತ್ರ ಸ್ಟಾಲಿನ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಭೆಯಲ್ಲಿ 3 ಸಾವಿರಕ್ಕೂ ಹೆಚ್ಚು ಸದಸ್ಯರು ಹಾಜರಿದ್ದರು.

ಅನಾರೋಗ್ಯಕ್ಕೆ ಒಳಗಾಗಿ ಗೋಪಾಲಪುರಂನ ತಮ್ಮ ನಿವಾಸದಲ್ಲಿ ವಿಶ್ರಾಂತಿಯಲ್ಲಿರುವ ಕರುಣಾನಿಧಿ ವೈದ್ಯರ ಸಲಹೆ ಮೇರೆಗೆ ಪಕ್ಷದ ಈ ಸಭೆಗೆ ಹಾಜರಾಗಲಿಲ್ಲ.  ಇಂದು ನಡೆದ ಸಭೆಯಲ್ಲಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ, ಖ್ಯಾತ ಪತ್ರಕರ್ತ ಹಾಗೂ ಚಿತ್ರನಟ ಚೊ.ರಾಮಸ್ವಾಮಿ, ಹಿರಿಯ ಧುರೀಣ ಕೊ.ಸಿ.ಮಣಿ ಹಾಗೂ ಕ್ಯೂಬಾದ ಕ್ರಾಂತಿಕಾರಿ ನಾಯಕ ಫಿಡಲ್ ಕ್ಯಾಸ್ಟ್ರೋ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.  ನಂತರ ನಡೆದ ಕಲಾಪದಲ್ಲಿ ಸ್ಟಾಲಿನ್ ಅವರನ್ನು ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡುವ ನಿರ್ಣಯವನ್ನು ಅವಿರೋಧವಾಗಿ ಅಂಗೀಕರಿಸಲಾಯಿತು.

92 ವರ್ಷದ ಕರುಣಾನಿಧಿ ಅನಾರೋಗ್ಯ ಪೀಡಿತರಾಗಿದ್ದು, ಆಗಾಗ ಅವರ ದೇಹ ಸ್ಥಿತಿಯಲ್ಲಿ ಏರುಪೇರು ಕಂಡುಬರುತ್ತಿರುವುದರಿಂದ ಪಕ್ಷವನ್ನು ಮುನ್ನಡೆಸಲು ಸ್ಟಾಲಿನ್ ಅವರಿಗೆ ಹೆಚ್ಚಿನ ಅಧಿಕಾರ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin