ಡಿಕೆಶಿ-ಚೆಲುವರಾಯಸ್ವಾಮಿ ಗೌಪ್ಯ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

DKS

ನಾಗಮಂಗಲ, ಆ.19- ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ್ದ ಸಚಿವ ಡಿ.ಕೆ.ಶಿವಕುಮಾರ್ ಜೆಡಿಎಸ್ನಿಂದ ಅಮಾನತಾದ ಶಾಸಕ ಚೆಲುವರಾಯಸ್ವಾಮಿ ಮತ್ತಿತರರೊಂದಿಗೆ ಗೌಪ್ಯ ಸಭೆ ನಡೆಸಿದ್ದಾರೆ.  ಇಂದು ಕಾಮಗಾರಿಗಳ ಉದ್ಘಾಟನೆಗಾಗಿ ನಾಗಮಂಗಲ ಪಟ್ಟಣಕ್ಕೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವರು ಗೌಪ್ಯ ಸಭೆ ನಡೆಸುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ.  ಜೆಡಿಎಸ್ನಿಂದ ಅಮಾನತಾಗಿರುವ ಶಾಸಕ ಚೆಲುವರಾಯಸ್ವಾಮಿ ಹಾಗೂ ಜೆಡಿಎಸ್ನ ಜಿಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರೊಂದಿಗೆ ಡಿಕೆಶಿ ಮಾತುಕತೆ ನಡೆಸಿದ್ದಾರೆ.  ಹಲವಾರು ದಿನಗಳಿಂದ ಜೆಡಿಎಸ್ನಿಂದ ಅಮಾನತಾದ ಶಾಸಕರ ನಡೆಯ ಬಗ್ಗೆ ಕೇಳಿ ಬರುತ್ತಿರುವ ವಿಷಯಗಳು ಸಾಕಷ್ಟು ಗೊಂದಲಗಳನ್ನು ಸೃಷ್ಟಿಸಿರುವ ಮಧ್ಯೆ ಸ್ವತಃ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ಮಾಡಿ ಸಭೆ ನಡೆಸಿರುವುದು ಯಾವ ಬೆಳವಣಿಗೆ ಉಂಟು ಮಾಡಲಿದೆ ಎಂಬ ಬಗ್ಗೆ ಕುತೂಹಲ ಕೆರಳಿಸಿದೆ.

► Follow us on –  Facebook / Twitter  / Google+

Facebook Comments

Sri Raghav

Admin