ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಪ್ರಕರಣದ ವಿಚಾರಣೆ ಅ.27ಕ್ಕೆ ಮುಂದೂಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Kallap

ಚಿಕ್ಕಮಗಳೂರು,ಅ.14- ತೇಜಸ್ ಗೌಡ ಅಪಹರಣ ಮತ್ತು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಅವರ ಆತ್ಮಹತ್ಯೆ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಅ.27ಕ್ಕೆ ಮುಂದೂಡಿ ಆದೇಶಿಸಿದೆ.
ಭದ್ರತೆಯ ಕೊರತೆಯಿಂದಾಗಿ ಆರೋಪಿಗಳನ್ನು ಹಾಜರುಪಡಿಸಲು ಸಿಐಡಿ ಅಧಿಕಾರಿಗಳಿಗೆ ಸಾಧ್ಯವಾಗದ ಕಾರಣಕ್ಕೆ ನಿನ್ನೆ ನಡೆಯಬೇಕಿದ್ದ ತೇಜಸ್ ಗೌಡ ಅಪಹರಣ ಮತ್ತು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆಯ ಬಗ್ಗೆ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.  ಪ್ರಮುಖ ಆರೋಪಿ ಪ್ರವೀಣ್ ಖಾಂಡ್ಯ ಕಳೆದ ಮೂರು ದಿನಗಳಿಂದ ತಲೆಮರೆಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 10 ಆರೋಪಿಗಳಾದ ಕೀರ್ತಿ, ಅಭಿಷೇಕ್, ಯಶಸ್ ಗೌಡ, ವಿಜಯಕುಮಾರ್, ಅಶ್ವಿನ್ ಶೆಟ್ಟಿ, ನವೀನ್ ಶೆಟ್ಟಿ , ಪ್ರದೀಪ್, ನಟರಾಜ್, ಜಾಯ್ ಮಿಲ್ಟನ್ ಮತ್ತು ಜೀವನ್‍ಕುಮಾರ್ ಅವರನ್ನು ಬಂಧಿಸಿ ವಿಚಾರಣೆ ನಡೆಸಿ ಅವರ ವಿರುದ್ದ ಪೊಲೀಸರು ಜಾರ್ಜ್‍ಶೀಟ್ ಸಲ್ಲಿಸಿದ್ದಾರೆ.

ತೇಜಸ್ ಗೌಡ ಅಪಹರಣಕ್ಕೆ ಸಂಬಂಧಿಸಿದಂತೆ ಬಸವನಹಳ್ಳಿ ಠಾಣೆಯಲ್ಲಿ ಜುಲೈ 4ರಂದು ಪ್ರಕರಣ ದಾಖಲಾಗಿತ್ತು. 5ರಂದು ಆರೋಪಿಗಳಲ್ಲಿ ಒಬ್ಬರಾಗಿದ್ದ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆಗೆ ಶರಣಾಗಿದ್ದರು.  ಆತ್ಮಹತ್ಯೆ ನಂತರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಒತ್ತಡ ನೀಡಿದ ಪರಿಣಾಮ ಸರ್ಕಾರ ಸಿಐಡಿಗೆ ವಹಿಸಿದ್ದು , ಈ ಪ್ರಕರಣ ವಿಚಾರಣೆ ಇದೇ 27ಕ್ಕೆ ಮುಂದೂಡಲಾಗಿದೆ.

► Follow us on –  Facebook / Twitter  / Google+

Facebook Comments

Sri Raghav

Admin