ಡಿವೈಎಸ್ಪಿ ಗಣಪತಿ ಪ್ರಕರಣ : ಮಾಜಿ ಮಂತ್ರಿ ಜಾರ್ಜ್, ಮೊಹಾಂತಿ, ಪ್ರಸಾದ್ ಗೆ ಕ್ಲೀನ್ ಚಿಟ್

ಈ ಸುದ್ದಿಯನ್ನು ಶೇರ್ ಮಾಡಿ

Ganapati

ಮಡಿಕೇರಿ, ಸೆ. 17 : ಡಿವೈಎಸ್ಪಿ. ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಸಿಐಡಿ, ಇಂದು ಮಡಿಕೇರಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದು, ಮಾಜಿ ಸಚಿವ ಕೆ.ಜೆ. ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಪ್ರಣಬ್ ಮೊಹಾಂತಿ ಹಾಗೂ ಎ.ಎಂ. ಪ್ರಸಾದ್ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಸಿಐಡಿ ಪೊಲೀಸರು ಮಡಿಕೇರಿ ಕೋರ್ಟ್ ಗೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಶನಿವಾರ ಸಿಐಡಿ ಪೊಲೀಸರು ಮಡಿಕೇರಿ ಕೋರ್ಟ್ ಗೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದು, ಮಾಜಿ ಸಚಿವ ಕೆ.ಜೆ.ಜಾರ್ಜ್, ಲೋಕಾಯುಕ್ತ ಐಜಿಪಿಯಾಗಿದ್ದ ಪ್ರಣಬ್ ಮೊಹಾಂತಿ, ಗುಪ್ತಚರ ವಿಭಾಗದ ಎಡಿಜಿಪಿಯಾಗಿದ್ದ ಎ.ಎಂ.ಪ್ರಸಾದ್ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಅಂತಿಮ ವರದಿಯನ್ನು ಸೆಪ್ಟೆಂಬರ್ 19ರೊಳಗೆ ಸಲ್ಲಿಸಬೇಕು ಎಂದು ಮಡಿಕೇರಿ ಕೋರ್ಟ್ ಸಿಐಡಿಗೆ ಸೂಚನೆ ನೀಡಿತ್ತು

ಜುಲೈ 7 ರಂದು ಮಡಿಕೇರಿಯ ವಿನಾಯಕ ಲಾಡ್ಜ್ ನಲ್ಲಿ ನೇಣಿಗೆ ಶರಣಾಗಿದ್ದ ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಆತ್ಮಹತ್ಯೆಗೂ ಮುನ್ನ ಸ್ಥಳೀಯ ಮಾಧ್ಯಮಕ್ಕೆ ಸಂದರ್ಶನ ನೀಡಿದ್ದು, ತಮಗೆ ಏನಾದರೂ ತೊಂದರೆಯಾದಲ್ಲಿ ಇದಕ್ಕೆ ಸಚಿವ ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಪ್ರಣಬ್ ಮೊಹಾಂತಿ ಹಾಗೂ ಎ.ಎಂ ಪ್ರಸಾದ್ ಕಾರಣವೆಂದು ಆರೋಪಿಸಿದ್ದರು. ಗಣಪತಿ ಆತ್ಮಹತ್ಯೆ ಬಳಿಕ ಪ್ರತಿಭಟನೆಗಳು ನಡೆದಿದ್ದು, ಈ ಹಿನ್ನಲೆಯಲ್ಲಿ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿತ್ತು.

ತಮ್ಮ ವಿರುದ್ದ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಸಚಿವ ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪ್ರಕರಣದ ತನಿಖೆ ನಡೆಸಿದ ಸಿಐಡಿ ಪೊಲೀಸರು ಇದೀಗ ಬಿ ರಿಪೋರ್ಟ್ ಸಲ್ಲಿಸಿದ್ದು, ಪ್ರಕರಣದಲ್ಲಿ ಹೆಸರಿಸಲಾಗಿದ್ದ ಮೂವರ ವಿರುದ್ದ ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲವೆಂದು ತಿಳಿಸಿದ್ದಾರೆನ್ನಲಾಗಿದೆ.

► Follow us on –  Facebook / Twitter  / Google+

Facebook Comments

Sri Raghav

Admin