ಡಿವೈಎಸ್ಪಿ ಗಣಪತಿ ಪ್ರಕರಣ : ಸಿಐಡಿಯಿಂದ ಪ್ರಸಾದ್,ಮೊಹಾಂತಿ ವಿಚಾರಣೆ

ಈ ಸುದ್ದಿಯನ್ನು ಶೇರ್ ಮಾಡಿ

Mohanty

ಬೆಂಗಳೂರು, ಆ.27- ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡ ಪ್ರಕರಣದ ಆರೋಪಿಗಳಾದ ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ ಅವರನ್ನು ಇಂದು ಬೆಳಗ್ಗೆ ವಿಚಾರಣೆಗೊಳಪಡಿಸಿತು.   ಮಧ್ಯಾಹ್ನದ ನಂತರ ವಿಚಾರಣೆಗೆ ಹಾಜರಾಗುವಂತೆ ಹಿರಿಯ ಅಧಿಕಾರಿ ಪ್ರಸಾದ್ ಅವರನ್ನು ಸಿಐಡಿ ತಂಡ ಸೂಚಿಸಿದೆ.  ಡಿವೈಎಸ್ಪಿ ಗಣಪತಿಯವರು ಮಡಿಕೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲಿ ಖಾಸಗಿ ಟಿವಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಅಂದಿನ ಗೃಹ ಸಚಿವ ಕೆ.ಜೆ.ಜಾರ್ಜ್, ಹಿರಿಯ ಐಪಿಎಸ್ ಅಧಿಕಾರಿಗಳಾದ ಪ್ರಣಬ್ ಮೊಹಾಂತಿ ಹಾಗೂ ಪ್ರಸಾದ್ ಅವರ ಹೆಸರನ್ನು ಪ್ರಸ್ತಾಪಿಸಿದ್ದರು.

ಈ ಹಿನ್ನೆಲೆಯಲ್ಲಿ ಗೃಹ ಸಚಿವ ಜಾರ್ಜ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಮೂವರ ಮೇಲೆ ಎಫ್ಐಆರ್ ದಾಖಲಿಸಿಕೊಂಡಿತು. ನಿನ್ನೆಯಿಂದ ವಿಚಾರಣೆ ಪ್ರಾರಂಭವಾಗಿದ್ದು , ಮಾಜಿ ಗೃಹ ಸಚಿವ ಜಾರ್ಜ್ ಅವರನ್ನು ಮೂರು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದಂತೆ 165ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದಿದ್ದರು.
ಇಂದು ಇಬ್ಬರು ಐಪಿಎಸ್ ಅಧಿಕಾರಿಗಳಾದ ಮೊಹಂತಿ ಹಾಗೂ ಪ್ರಸಾದ್ ಅವರ ವಿಚಾರಣೆಗೆ ಬರುವಂತೆ ನೋಟಿಸ್ ನೀಡಲಾಗಿತ್ತು. ಸಿಐಡಿ ಎಡಿಜಿಪಿ ಪ್ರತಾಪ್ ನೇತೃತ್ವದಲ್ಲಿ ವಿಚಾರಣೆ ನಡೆದಿದೆ.

► Follow us on –  Facebook / Twitter  / Google+

Facebook Comments

Sri Raghav

Admin