ಡಿಸಿಗೆ ಧಮ್ಕಿ ಪ್ರಕರಣ : ಸಿಎಂ ಆಪ್ತ ಮರಿಗೌಡಗೆ ಜಾಮೀನು

ಈ ಸುದ್ದಿಯನ್ನು ಶೇರ್ ಮಾಡಿ

S-Marigouda

ಮೈಸೂರು ಆ.25: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿ ಜೈಲು ಪಾಲಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಮೈಸೂರು ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕೆ.ಮರಿಗೌಡ ಅವರಿಗೆ ಗುರುವಾರ 7ನೇ ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮರಿಗೌಡ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.  ಸುಮಾರು ಒಂದು ತಿಂಗಳ ನಂತರ ಪೊಲೀಸರಿಗೆ ಶರಣಾಗಿದ್ದ ಮರಿಗೌಡ ಅವರನ್ನು ನಜರ್ ಬಾದ್ ಪೊಲೀಸರು ಮೈಸೂರಿನ ಮೂರನೇ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶೆ ದೀಪಾ ಅವರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಬಳಿಕ ಪೊಲೀಸರು ಸಿಎಂ ಆಪ್ತನನ್ನು ಮೈಸೂರು ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin