ಡಿಸೆಂಬರ್ ಅಂತ್ಯದೊಳಗೆ 100 ಕೋಟಿ ಜನರಿಗೆ ಲಸಿಕೆ : ಜಿ.ಎಂ. ಸಿದ್ದೇಶ್ವರ

ಈ ಸುದ್ದಿಯನ್ನು ಶೇರ್ ಮಾಡಿ

ದಾವಣಗೆರೆ, ಸೆ.18- ಡಿಸೆಂಬರ್ ಅಂತ್ಯದ ವೇಳೆಗೆ ದೇಶದ 100 ಕೋಟಿ ಜನರಿಗೆ ಎರಡು ಡೋಸ್ ಲಸಿಕೆ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದರು. ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯಿಂದ ಏರ್ಪಡಿಸಿದ್ದ ಮೆಗಾ ಕೊರೊನಾ ಲಸಿಕೆ ಮೇಳದ ಹಿನ್ನೆಲೆಯಲ್ಲಿ ಇಲ್ಲಿನ ವಿದ್ಯಾನಗರದ ಲಯನ್ಸ್ ಕ್ಲಬ್‍ನ ಲಸಿಕಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರೊಂದಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಜನರಿಗೆ ಧೈರ್ಯ ಹೇಳಿ ಲಸಿಕೆ ಪಡೆಯುವಂತೆ ಪ್ರೇರೇಪಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆ ನಗರ ಪಾಲಿಕೆಯ ಎಲ್ಲಾ 45 ವಾರ್ಡ್ ಗಳು, ಎಲ್ಲಾ ನಗರಸಭೆ ಮತ್ತು ಜಿಲ್ಲೆಯ 197 ಗ್ರಾಮ ಪಂಚಾಯಿತಿಗಳಲ್ಲಿ ಇಂದು ಒಟ್ಟು 582 ಲಸಿಕಾ ಕೇಂದ್ರಗಳಲ್ಲಿ 1 ಲಕ್ಷ ಡೋಸ್ ಕೋವಿಡ್ ಲಸಿಕೆ ನೀಡಲಾಗುತ್ತಿದ್ದು, ಈ ವರೆಗೆ ಜಿಲ್ಲೆಯ 10.57 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಇಂದು ನಡೆಯುತ್ತಿದ್ದು, ಇನ್ನೂ ನೂರು ವರ್ಷ ಬಾಳಿ ಪ್ರಧಾನಿಯಾಗಿ ದೇಶವನ್ನು ಸಮರ್ಥವಾಗಿ ನಡೆಸುವ ಶಕ್ತಿಯನ್ನು ಭಗವಂತ ಅವರಿಗೆ ಕರುಣಿಸಲಿ. ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇಡೀ ಪ್ರಪಂಚದಲ್ಲಿ ಯಾರೂ ಮಾಡದ ಕೆಲಸವನ್ನು ಮಾಡಿದ್ದು, ಪ್ರಪಂಚಕ್ಕೆ ನಂ.1 ವ್ಯಕ್ತಿ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಮೋದಿ ಅವರು ಮತ್ತೆ ಪ್ರಧಾನಿಯಾಗಿ ಆದೇಶದ ಆರ್ಥಿಕತೆ ಬೆಳೆಯಲು, ಭಯೋತ್ಪಾದನಾ ಚಟುವಟಿಕೆಗೆ ಕಡಿವಾಣ ಹಾಕಲು ಮತ್ತು ದೇಶದ ಎಲ್ಲಾ ವರ್ಗದ ಜನರ ಕಲ್ಯಾಣಕ್ಕೆ ಮುಂದಾಗಲಿ ಎಂದು ಶುಭ ಹಾರೈಸಿದರು.

Facebook Comments