ಡಿ.ಕೆ ರವಿಯದ್ದು ಕೊಲೆ, ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ : ತಾಯಿ ಗೌರಮ್ಮ ಪುನರುಚ್ಚಾರ

ಈ ಸುದ್ದಿಯನ್ನು ಶೇರ್ ಮಾಡಿ

dk

ಬೆಂಗಳೂರು, ನ.24- ಕೋಲಾರ ಜಿಲ್ಲಾಧಿಕಾರಿಯಾಗಿದ್ದ ಡಿ.ಕೆ.ರವಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಿದ್ಧಪಡಿಸಿರುವ ಎಲ್ಲಾ ವರದಿಗಳನ್ನು ತಮಗೆ ನೀಡಬೇಕೆಂದು ರವಿ ತಾಯಿ ಗೌರಮ್ಮ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಮಗ ಡಿ.ಕೆ.ರವಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಂಪೂರ್ಣ ತನಿಖೆ ನಡೆಸಿದೆ ಹಾಗೂ ಸಿಬಿಐ ತನಿಖಾ ವರದಿಯ ಒಂದು ಪ್ರತಿಯನ್ನು ನಮಗೂ ಸಲ್ಲಿಸುವಂತೆ ಕೋರಲಾಗಿತ್ತು. ಆದರೆ, ಸಿಬಿಐ ಅಧಿಕಾರಿಗಳು ಈ ಪ್ರಕರಣದಲ್ಲಿ ಸಂಗ್ರಹಿಸಿರುವ ಎಲ್ಲ ಮಾಹಿತಿಗಳನ್ನೊಳಗೊಂಡ ವರದಿಯನ್ನು ಉಪ ವಿಭಾಗದ ಅಧಿಕಾರಿಗಳಿಗೆ ಮಾತ್ರ ನೀಡಿದ್ದಾರೆ. ಆದರೆ, ನಮಗೆ ಇದುವರೆಗೂ ಕೊಟ್ಟಿಲ್ಲ ಎಂದು ಆರೋಪಿಸಿದ್ದಾರೆ.

2016 ಡಿಸೆಂಬರ್ 20ರಂದೇ ವರದಿ ನೀಡಲು ಅರ್ಜಿ ಸಲ್ಲಿಸಲಾಗಿದೆ. ಆದರೆ, ಪ್ರಭಾವಿ ರಾಜಕಾರಣಿಗಳ ಒತ್ತಡಕ್ಕೆ ಮಣಿದಿರುವ ಎಸಿ ರವರು ನಮಗೆ ಸಿಬಿಐ ವರದಿ ನೀಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ದೂರಿದರು. ನನ್ನ ಮಗನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಲಭ್ಯವಿರುವ ಸಾಕಷ್ಟು ಸಾಕ್ಷ್ಯಗಳನ್ನು ನಾಶ ಮಾಡಲಾಗಿದೆ. ನನ್ನ ಮಗನ ಕತ್ತಿನಲ್ಲಿದ್ದ ಚುಚ್ಚುಮದ್ದಿನ ಗುರುತಿಗೆ ಸಂಬಂಧಿಸಿದಂತೆ ಸತತ ಮೂರು ಗಂಟೆಗಳ ಕಾಲ ಸಿಬಿಐ ಅಧಿಕಾರಿಗಳು ನನ್ನಿಂದ ಮಾಹಿತಿ ಪಡೆದಿದ್ದಾರೆ. ಇದರ ಬಗ್ಗೆ ಎಲ್ಲೂ ಪ್ರಸ್ತಾಪ ಮಾಡಿಲ್ಲ ಎಂದರು. ನನ್ನ ಮಗ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ. ಅದು ಕೊಲೆ ಎಂದು ಗೌರಮ್ಮ ಪುನರುಚ್ಚರಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin