ಡಿ.ಕೆ.ರವಿ ಸಾವಿನಲ್ಲಿ ರಾಜಕೀಯ ಮಾಡಿದ ಪ್ರತಿಪಕ್ಷಗಳು ಕ್ಷಮೆ ಕೇಳಲಿ

ಈ ಸುದ್ದಿಯನ್ನು ಶೇರ್ ಮಾಡಿ

DKRavi

ಬೆಂಗಳೂರು, ನ.26- ಐಎಎಸ್ ಅಧಿಕಾರಿಯಾಗಿದ್ದ ಡಿ.ಕೆ.ರವಿಯವರ ಆತ್ಮಹತ್ಯೆ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಂಡ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸರ್ಕಾರವನ್ನು ಬಹಿರಂಗ ಕ್ಷಮೆ ಯಾಚಿಸಬೇಕೆಂರಾಜಾಜಿನಗರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಮಿತಿ ಒತ್ತಾಯಿಸಿದೆ. ಕವಿಕಾ ಅಧ್ಯಕ್ಷರಾದ ಮನೋಹರ್, ಸಮಿತಿಯ ಮುಖಂಡರಾದ ಜಿ.ಜನಾರ್ದನ್, ಜಿ.ಶಂಕರೇಗೌಡ, ಶೇಖರ್ ಮುಂತಾದವರು ಪತ್ರಿಕಾ ಹೇಳಿಕೆ ನೀಡಿ ಐಎಎಸ್ ಅಧಿಕಾರಿ ಡಿ.ಕೆ.ರವಿಯವರ ಸಾವು ಆತ್ಮಹತ್ಯೆ ಎಂದು ಸಿಬಿಐ ವರದಿ ನೀಡಿದೆ.  ಅವರ ಆತ್ಮಹತ್ಯೆ ಪ್ರಕರಣವನ್ನು ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ನಾಯಕರು ರಾಜಕೀಯ ಲಾಭಕ್ಕೆ ದುರುಪಯೋಗಪಡಿಸಿಕೊಂಡಿದ್ದು ಈಗ ಬಹಿರಂಗವಾಗಿದೆ.

ಕೂಡಲೇ ಅವರು ಕಾಂಗ್ರೆಸ್ ನಾಯಕರ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ಡಿ.ಕೆ.ರವಿಯವರು ಪ್ರಾಮಾಣಿಕ ಅಧಿಕಾರಿಯಾಗಿದ್ದರು ಎಂಬುದು ಎಲ್ಲರಿಗೂ ತಿಳಿದ ವಿಷಯವಾಗಿತ್ತು. ಆದರೆ, ಅವರ ಆತ್ಮಹತ್ಯೆಗೆ ಕಾರಣ ಏನೆಂಬುದನ್ನು ತನಿಖೆಯಿಂದ ಬಹಿರಂಗಗೊಳ್ಳುವ ಮುನ್ನವೇ ಪ್ರತಿಭಟನೆ, ಧರಣಿ ನಡೆಸಿ ಸರ್ಕಾರದ ಮೇಲೆ ಅನುಮಾನ ಮೂಡುವಂತೆ ಮಾಡಿ ಕುತಂತ್ರ ರೂಪಿಸಲಾಗಿತ್ತು. ರಾಜ್ಯದ ಪೊಲೀಸ್ ಇಲಾಖೆ ಮೇಲೆ ವಿಶ್ವಾಸವಿಲ್ಲದಂತೆ ಮಾಡಿ ಪ್ರತಿಪಕ್ಷಗಳು ಸಿಬಿಐ ತನಿಖೆಗೆ ವಹಿಸಬೇಕೆಂದು ಒತ್ತಾಯ ಮಾಡಿದ್ದವು. ಈಗ ಸಿಬಿಐ ತನಿಖೆ ನಡೆಸಿ ಸತ್ಯಾಂಶ ಬಹಿರಂಗವಾಗಿದೆ. ಡಿ.ಕೆ.ರವಿಯವರ ಸಾವಿನ ಹೆಸರಿನಲ್ಲಿ ರಾಜಕೀಯ ಮಾಡಿದವರ ಬಣ್ಣ ಬಯಲಾಗಿದೆ ಎಂದು ಆರೋಪಿಸಿದ್ದಾರೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin