ಡೆಂಘೀಗೆ ಬಾಲಕ ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

dengue

ದಾವಣಗೆರೆ, ಸೆ.23- ಡೆಂಘೀ ಜ್ವರದಿಂದ ಬಳಲುತ್ತಿದ್ದ ಬಾಲಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಂಜೆ ಮೃತಪಟ್ಟಿರುವ ಘಟನೆ ನಗರದ ಎಸ್‍ಎಸ್ ಬಡಾವಣೆಯಲ್ಲಿ ನಡೆದಿದೆ. ಹರ್ಷಿತ್ (7) ಮೃತಪಟ್ಟ ಬಾಲಕ.ಕೆಲ ದಿನಗಳಿಂದ ಜ್ವರದಿಂದ ಬಳುತ್ತಿದ್ದ ಬಾಲಕನನ್ನು ಪೊಷಕರು ನಗರದ ಬಾಲಾಜಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹರ್ಷಿತ್ ಮೃತಪಟ್ಟಿದ್ದಾನೆ.ಡೆಂಘೀ ಜ್ವರದಿಂದ ಮೃತಪಟ್ಟ ಬಾಲಕನ ಪೊ ಷಕರು ಜಿಲ್ಲಾಧಿಕಾರಿ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದಾರೆ.ನಗರದಲ್ಲಿ ಹಂದಿ, ಸೊಳ್ಳೆಗಳ ಹಾವಳಿ ಹೆಚ್ಚಾಗಿದ್ದು, ಜನರಲ್ಲಿ ಜ್ವರ ಕಾಣಿಸಿಕೊಳ್ಳುತ್ತಿರುವ ಪ್ರಕರಣಗಳು ಅಧಿಕವಾಗುತ್ತಿವೆ.ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ.

 

► Follow us on –  Facebook / Twitter  / Google+

Facebook Comments

Sri Raghav

Admin