ಡೊನಾಲ್ಡ್ ಟ್ರಂಪ್ ವಿರುದ್ಧದ ಮಹಿಳೆಯರ ಆಕ್ರೋಶಕ್ಕೆ ಪಿಂಕಿ ಸಾಥ್

ಈ ಸುದ್ದಿಯನ್ನು ಶೇರ್ ಮಾಡಿ

Priyanka-012

ಅಮೆರಿಕದಲ್ಲೂ ಜನಪ್ರಿಯವಾಗಿರುವ ಬಾಲಿವುಡ್ ಬೆಡಗಿ ಪ್ರಿಯಾಂಕಾ ಚೋಪ್ರಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಧ್ವನಿ ಎತ್ತಿ ಮತ್ತೆ ಸುದ್ದಿಯಲ್ಲಿದ್ದಾಳೆ. ಟ್ರಂಪ್ 45ನೇ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಮರುದಿನವೇ ಅಮೆರಿಕ ಸೇರಿದಂತೆ ವಿಶ್ವದ ಹಲವೆಡೆ ಮಹಿಳೆಯರ ಹಕ್ಕು ರಕ್ಷಣೆಗಾಗಿ ನಡೆಯುತ್ತಿರುವ ಪ್ರತಿಭಟನೆಗೆ ಪಿಗ್ಗಿ ಸಾಥ್ ನೀಡಿದ್ದಾಳೆ. ಟ್ರಂಪ್ ಮಹಿಳಾ ವಿರೋಧ ನೀತಿ ವಿರುದ್ಧ ವಾಷಿಂಗ್ಟನ್‍ನಲ್ಲಿ ನಡೆದ ಮಹಿಳೆಯರ ಶಾಂತಿಯುತ ಪ್ರತಿಭಟನೆಯಲ್ಲಿ ಪಿಂಕಿಗೆ ಭಾಗವಹಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಬೇವಾಚ್ ಚಿತ್ರದ ಶೂಟಿಂಗ್‍ಗಾಗಿ ಆಕೆ ಲಾಸ್ ಏಂಜೆಲಿಸ್‍ನಲ್ಲಿದ್ದಳು. ಆದರೂ ಆಕೆ ಮಹಿಳೆಯರ ಪ್ರತಿಭಟನೆ ಮತ್ತು ಆಕ್ರೋಶಕ್ಕೆ ಧನಿಯಾಗಿದ್ದಾಳೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪಿಗ್ಗಿ, ನನ್ನೆಲ್ಲ ಸಹೋದರಿಯರ ಬಗ್ಗೆ ನನಗೆ ತುಂಬಾ ಗೌರವ ಮತ್ತು ಹೆಮ್ಮೆ ಇದೆ. ಆದರೆ ಈ ಪ್ರತಿಭಟನೆಯಲ್ಲಿ ಭಾಗವಹಿಸಲು ಅನಿವಾರ್ಯ ಕಾರಣಗಳಿಂದ ಸಾಧ್ಯವಾಗದ ಬಗ್ಗೆ ನನಗೆ ಅಸಮಾಧಾನವಿದೆ. ಮಹಿಳೆಯರ ಹಕ್ಕುಗಳು ಮಾನವ ಹಕ್ಕುಗಳು. ಮಹಿಳೆಯರ ಹಕ್ಕುಗಳನ್ನು ರಕ್ಷಿಸಬೇಕು ಎಂಬ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದ್ದಾಳೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin