ತಂದೆ ಸಮಾಧಿ ಬಳಿಯೇ ಮಗ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Suicide--01

ಚಿಕ್ಕಬಳ್ಳಾಪುರ, ಆ.10- ಸಾಲಬಾಧೆ ತಾಳಲಾರದೆ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿಡ್ಲಘಟ್ಟ ತಾಲೂಕಿನ ಆನೂರು ಗ್ರಾಮದಲ್ಲಿ ನಡೆದಿದೆ. ಪ್ರಕಾಶ್ (35) ಆತ್ಮಹತ್ಯೆ ಮಾಡಿಕೊಂಡ ರೈತ. ಈತ ಸಾಲ ಮಾಡಿಕೊಂಡು ತನ್ನ ಜಮೀನಿನಲ್ಲಿ 2 ಬೋರ್‍ವೆಲ್‍ಗಳನ್ನು ಕೊರೆಸಿದ್ದು, ನೀರು ಸಿಗದೆ ಕಂಗಾಲಾಗಿದ್ದ. ಕೈಸಾಲ ಮತ್ತು ಬ್ಯಾಂಕ್ ಸಾಲ ಪಡೆದಿದ್ದು, ಇದನ್ನು ತೀರಿಸಲಾಗದೆ ಚಿಂತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಪತ್ನಿ ಮತ್ತು ಮಕ್ಕಳನ್ನು ಶಿರಡಿಗೆ ಪ್ರವಾಸಕ್ಕೆ ಕಳುಹಿಸಿ ತಂದೆಯ ಸಮಾಧಿ ಬಳಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸಮಾಧಿ ಬಳಿ ಬಿದ್ದಿದ್ದ ಪ್ರಕಾಶ್‍ರನ್ನು ಕಂಡ ಗ್ರಾಮಸ್ಥರು ಶಿಡ್ಲಘಟ್ಟ ಗ್ರಾಮಾಂತರ ಠಾಣೆಗೆ ಸುದ್ದಿ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin