ತಕ್ಷಣವೇ 50 ಟಿಎಂಸಿ ನೀರು ಹರಿಸಲು ಕೋರಿದ್ದ ತಮಿಳುನಾಡು ಅರ್ಜಿ ಮುಂದೂಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

S-Supreme-Court

ನವದೆಹಲಿ,ಆ.26- ಕಾವೇರಿ ಜಲಾಶಯದಿಂದ ತಕ್ಷಣವೇ 50 ಟಿಎಂಸಿ ನೀರು ಹರಿಸಲು ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಎರಡು ವಾರಗಳ ಕಾಲ ಮುಂದೂಡಿದೆ. ಮುಖ್ಯನ್ಯಾಯಮೂರ್ತಿ ಠಾಕೂರ್ ಹಾಗೂ ನ್ಯಾಯಮೂರ್ತಿ ಗೋಪಾಲಗೌಡ ನೇತೃತ್ವದ ದ್ವಿಸದಸ್ಯ ಪೀಠ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಪೀಠ ಇಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡು ಸಾಕ್ಷ್ಯಾಧಾರಗಳ ಸಂಗ್ರಹಣೆಗೆ ಸಮಯಾವಕಾಶ ನೀಡಬೇಕೆಂದು ಕರ್ನಾಟಕಪರ ವಕೀಲರು ಮನವಿ ಮಾಡಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಾಧೀಶರು ಸಾಕ್ಷ್ಯಾಧಾರಗಳ ಸಂಗ್ರಹಣೆಗೆ ಅವಕಾಶ ನೀಡಿ ತಮಿಳುನಾಡು ಸರ್ಕಾರದ ಅರ್ಜಿಯನ್ನು ಎರಡು ವಾರಗಳ ಕಾಲ ಮುಂದೂಡಿದರು.

ಕಳೆದ ಐದು ದಿನಗಳ ಹಿಂದೆ ಸುಪ್ರೀಂಕೋರ್ಟ್ಗೆ ತುರ್ತು ಅರ್ಜಿ ಸಲ್ಲಿಸಿದ್ದ ತಮಿಳುನಾಡು ಕಾವೇರಿ ಜಲಾಶಯದಿಂದ 50 ಟಿಎಂಸಿ ನೀರು ಹಾಗೂ 2250 ಕೋಟಿ ರೂ. ಬೆಳೆ ಪರಿಹಾರ ನೀಡುವಂತೆ ನಿರ್ದೇಶನ ನೀಡಬೇಕೆಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಸಂಕಷ್ಟ ಸೂತ್ರದ ಪ್ರಕಾರ ಕರ್ನಾಟಕ ಸರ್ಕಾರ ತಮಿಳುನಾಡಿಗೆ 50 ಟಿಎಂಸಿ ನೀರು ಹರಿಸದಿರುವುದು ಹಾಗೂ ಬೆಳೆದು ನಿಂತ ಸಾಂಬಾ ಬೆಳೆ ನಷ್ಟವಾಗಿರುವುದರಿಂದ ರೈತರಿಗೆ ಪರಿಹಾರವಾಗಿ 2250 ಕೋಟಿ ಹಣ ನೀಡಲು ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ವಕೀಲರು ಮನವಿ ಮಾಡಿದ್ದರು.

ತಮಿಳುನಾಡು ಅರ್ಜಿಗೆ ಆಕ್ಷೇಪಿಸಿದ ಕರ್ನಾಟಕದ ವಕೀಲರು ಇದೊಂದು ಸೂಕ್ಷ್ಮವಾದ ವಿಚಾರವಾಗಿರುವುದರಿಂದ ಸಾಕ್ಷ್ಯಾಧಾರ ಸಂಗ್ರಹಿಸಿ ನಂತರ ಅರ್ಜಿ ವಿಚಾರಣೆ ನಡೆಸುವಂತೆ ನ್ಯಾಯಾಧೀಶರಿಗೆ ಮನವರಿಕೆ ಮಾಡಿಕೊಟ್ಟರು. ಈ ಹಿನ್ನೆಲೆಯಲ್ಲಿ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಮುಂದೂಡಿತು.

► Follow us on –  Facebook / Twitter  / Google+

Facebook Comments

Sri Raghav

Admin