ತಮಿಳಿಗರ ಅಂಗಡಿ ಮುಚ್ಚಿ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

KARNATAKA--RAKSHANA--VEDIKE

ಕೆ.ಆರ್.ಪೇಟೆ, ಸೆ.14- ತಮಿಳುನಾಡು ಕ್ರಮ ಖಂಡಿಸಿ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಅಧ್ಯಕ್ಷ ಹೊನ್ನೇನಹಳ್ಳಿ ಡಿ.ಎಸ್.ವೇಣು ನೇತೃತ್ವದಲ್ಲಿ ಪಟ್ಟಣದ ತಮಿಳುನಾಡು ಮೂಲದ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು.  ಪಟ್ಟಣದ ವಿವಿಧ ಭಾಗಗಳಲ್ಲಿ ಕಳೆದ ಹಲವು ವರ್ಷಗಳಿಂದ ತಮಿಳಿಗರು ಇಲ್ಲಿ ವ್ಯಾಪಾರ ಮಾಡಿಕೊಂಡಿದ್ದು, ಅಂತಹ ಅಂಗಡಿಗಳನ್ನು ಕರವೇ ಕಾರ್ಯಕರ್ತರು ಮುಚ್ಚಿಸಿ ಪ್ರತಿಭಟಿಸಿದರು.ಶಾಂತಿಯುತವಾಗಿ ಪ್ರತಿಭಟನೆ ಮಾಡಿ ತಮಿಳುನಾಡಿನವರಿಗೆ ಬಿಸಿ ಮುಟ್ಟಿಸುತ್ತಿದ್ದೇವೆ ಎಂದು ಅಧ್ಯಕ್ಷ ವೇಣು ತಿಳಿಸಿದರು.
ಕನ್ನಡಿಗರ ಮೇಲೆ ನಡೆದ ಹಲ್ಲೆಗೆ ತಮಿಳುನಾಡು ಸರ್ಕಾರ ಕನ್ನಡಿಗರ ಕ್ಷಮೆ ಯಾಚಿಸಬೇಕು. ತಮಿಳು ನಾಡಿನ ಕನ್ನಡಿಗರಿಗೆ ಸೂಕ್ತ ರಕ್ಷಣೆ ನೀಡಬೇಕಲ್ಲದೆ ಕನ್ನಡಿಗರ ಮೇಲೆ ಹಲ್ಲೆ ನಡೆಸಿದ ಹಲ್ಲೆಕೋರರನ್ನು ಬಂಧಿಸಬೇಕು. ಇಲ್ಲದಿದ್ದರೆ ಉಗ್ರಹೋರಾಟ ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.ತಾಲೂಕು ಸಂಘಟನಾ ಕಾರ್ಯದರ್ಶಿ ಟೆಂಪೋ  ಶ್ರೀನಿವಾಸ್, ಕಾರ್ಯದರ್ಶಿ ಸಮೀರ್, ಸ್ವಾಮಿ, ಅಜಯ್, ವರುಣ್, ಬುಕ್‍ಸ್ಟೋರ್ ಮಧನ್, ಚೇತನ್, ಹರೀಶ್ ಮತ್ತಿತರರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin