ತಮಿಳುನಾಡು ಬಂದ್ : ಮೈಸೂರಿನಲ್ಲಿ ಬಿಗಿ ಬಂದೋಬಸ್ತ್
ಈ ಸುದ್ದಿಯನ್ನು ಶೇರ್ ಮಾಡಿ
ಮೈಸೂರು,ಸೆ.16-ತಮಿಳುನಾಡಿನಲ್ಲಿ ಬಂದ್ ಆಚರಿಸಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನಾದ್ಯಂತ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನಗರದಲ್ಲಿರುವ ಹಲವು ತಮಿಳಿಗರ ವ್ಯಾಪಾರ ಮಳಿಗೆಗಳನ್ನು ಮುಚ್ಚಲಾಗಿದ್ದು, ಪ್ರಮುಖ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಅರಮನೆ ಸೇರಿದಂತೆ ತಮಿಳಿಗರು ವಾಸವಿರುವ ಕೆಲವು ಪ್ರದೇಶಗಳಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.ಇಂದು ಬೆಳಗ್ಗೆಯಿಂದಲೇ ಹಿರಿಯ ಪೊಲೀಸ್ ಅಧಿಕಾರಿಗಳು ಯಾವುದೇ ಅಹಿತರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿ ಭದ್ರತಾ ಕಾರ್ಯದಲ್ಲಿ ತೊಡಗಿದ್ದಾರೆ.
► Follow us on – Facebook / Twitter / Google+
Facebook Comments