ತಮಿಳು ಕಿರುತೆರೆ ನಟಿ ಸಾಬರ್ನಾ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Actess

ಚೆನ್ನೈ, ನ.12-ತಮಿಳು ಕಿರುತೆರೆ ನಟಿ ಸಾಬರ್ನಾ ಸಾಬೂ ಚೆನ್ನೈನಲ್ಲಿರುವ ತನ್ನ ಅಪಾರ್ಟ್‍ಮೆಂಟ್ ನಲ್ಲಿ ಶವವಾಗಿ ಪತ್ತೆ ಯಾಗಿದ್ದು, ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ನಟಿ ವಾಸವಿದ್ದ ಅಪಾರ್ಟ್ ಮೆಂಟ್ ಮನೆ ಕಳೆದ ಮೂರು ದಿನಗಳಿಂದ ಲಾಕ್ ಆಗಿತ್ತು. ಆದರೆ ಮನೆಯಿಂದ ಕೆಟ್ಟ ವಾಸನೆ ಬರುತ್ತಿದ್ದರಿಂದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ನಟಿಯ ಮನೆಯ ಬಾಗಿಲು ಒಡೆದು ನೋಡಿದಾಗ ಸಾಬರ್ನಾ ಶವ ಕೊಳೆತ ಸ್ಥಿತಿಯಲ್ಲಿ ಕಂಡು ಬಂದಿದೆ.ಘಟನಾ ಸ್ಥಳದಲ್ಲಿ ಪೊಲೀಸರು ಡೆಟ್ ನೋಟ್ ವಶಪಡಿಸಿ ಕೊಂಡಿದ್ದಾರೆ. ಇನ್ನು ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದು ತನಿಖೆ ನಡೆಸುತ್ತಿದ್ದಾರೆ.ಸಾಬರ್ನಾ ಸಾವಿನ ಸುದ್ದಿ ತಮಿಳು ಕಿರುತೆರೆ ಚಿತ್ರರಂಗವನ್ನು ದಂಗುಬಡಿಸಿದೆ. ಕಿರುತೆರೆ ನಿರೂಪಕಿಯಾಗಿ ವೃತ್ತಿ ಜೀವನ ಆರಂಭಿಸಿದ್ದ ಸಬಾರ್ನಾ ಹಲವು ಧಾರವಾಹಿಗಳಲ್ಲಿ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin