ತಹಶೀಲ್ದಾರ್ ವರ್ಗಾವಣೆಗೆ ಆಗ್ರಹಿಸಿ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

chikkabalapura

ಗೌರಿಬಿದನೂರು, ಏ.26-ದಲಿತರನ್ನು ದಮನ ಮಾಡಿ ಸಂಘಟನೆಗಳನ್ನು ಹೊಡೆಯುವ ಹುನ್ನಾರವನ್ನು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮಾಡುತ್ತಿದ್ದಾರೆ ಎಂದು ಕರ್ನಾಟಕ ದಲಿತ ಸಿಂಹಸೇನೆ ರಾಜ್ಯಾಧ್ಯಕ್ಷ ಹೂವಳ್ಳಿ ಪ್ರಕಾಶ್ ಆರೋಪಿಸಿದರು.ಕರ್ನಾಟಕ ದಲಿತ ಸಿಂಹ ಸೇನೆಯ ವತಿಯಿಂದ ತಾಲೂಕು ತಹಶೀಲ್ದಾರ್ ರವರನ್ನು ವರ್ಗಾವಣೆ ಮಾಡುವಂತೆ ಆಗ್ರಹಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ ಒಂದು ವರ್ಷದಿಂದ ಅನೇಕ ಜ್ವಲಂತ ಸಮಸ್ಯೆಗಳ ಬೇಡಿಕೆ ಇಟ್ಟು, ಹಲವಾರು ಪ್ರತಿಭಟನೆಗಳನ್ನು ಮಾಡಿದ್ದರೂ, ಬೇಜವಾಬ್ದಾರಿ ಅಧಿಕಾರಿಗಳಿಂದ ಪ್ರತಿಭಟನೆಗಳು ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಮಂಚೇನಹಳ್ಳಿ ವ್ಯಾಪ್ತಿಯಲ್ಲಿ ಸತತ ಅಕ್ರಮ ಮರಳು ಸಾಗಾಣಿಕೆ, ಕಲ್ಲು ಗಣಿಗಾರಿಕೆ ಇನ್ನಿತರೆ ಅಕ್ರಮ ಚಟುವಟಿಕೆಗಳ ನಡೆಯುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ಜನಪ್ರತಿನಿಧಿಗಳ ಕೈಗೊಂಬೆಗಳಾಗಿ ವರ್ತಿಸುತ್ತಿದ್ದಾರೆ.

ಇಂಥಹ ಅಧಿಕಾರಿಗಳನ್ನು ಸರಕಾರ ಅವಲೋಕಿಸಿ ಈ ಕೂಡಲೇ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿದರು.ಕರ್ನಾಟಕ ದಲಿತ ಸಿಂಹ ಸೇನೆಯ ಗೌರವಾಧ್ಯಕ್ಷ ಲಕ್ಷ್ಮಣ್ ಮಾತನಾಡಿ, ಅರಸಾಲಬಂಡೆಯ ಕಲ್ಲುಗಣಿಗಾರಿಕೆ ಸಂಪೂರ್ಣ ಅವೈಜ್ಞಾನಿಕವಾಗಿದ್ದು, ತಪ್ಪು ಮಾಹಿತಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಿ ಅನುಮತಿ ಪಡೆದಿದ್ದು, ಇದರಿಂದ ಸುತ್ತಮುತ್ತಲಿನ ಕೃಷಿ ನಿರತ ರೈತರಿಗೆ ಮತ್ತು ವಾಸ ಮಾಡುವ ಗ್ರಾಮಸ್ಥರಿಗೆ ಆತಂಕಪಡುವ ಸ್ಥಿತಿ ಬಂದೊದಗಿದೆ. ಇದರ ಸಂಪೂರ್ಣ ತನಿಖೆ ಆಗಬೇಕೆಂದು ಆಗ್ರಹಪಡಿಸಿದರು.ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಉಪವಿಭಾಗಾಧಿಕಾರಿ ಆಗಮಿಸಬೇಕೆಂದು ಪಟ್ಟು ಹಿಡಿದು ಸುಮಾರು ಮೂರು ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು.

ಜಿಲ್ಲಾ ಉಪವಿಭಾಗಾಧಿಕಾರಿಗಳು ನ್ಯಾಯಾಲಕ್ಕೆ ತೆರಳಿದ್ದರಿಂದ ಸ್ಥಳಕ್ಕೆ ಆಗಮಿಸಲಾಗದ ಕಾರಣ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಕೃಷ್ಣಪ್ಪ ರವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. ಮನವಿ ಪತ್ರವನ್ನು ಸ್ವೀಕರಿಸಿ ಸಮಾಜ ಕಲ್ಯಾಣಾಧಿಕಾರಿ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ರವಾನಿಸುವುದಾಗಿ ತಿಳಿಸಿದರು.ತಾಲ್ಲೂಕು ಅಧ್ಯಕ್ಷ ವೆಂಕಟಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ವಿಜಯ್(ವಕೀಲ), ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಬಿ.ಎನ್.ಕೃಷ್ಣಮೂರ್ತಿ, ಎನ್.ಪೃಥ್ವಿರಾಜ್, ಆನಂದ್, ಸುಕೂರ್ ಸಾಬ್, ವೆಂಕಟೇಶ್, ಬಾಯಣ್ಣ, ಗಂಗಾಧರಪ್ಪ, ತೊಂಡೇಭಾವಿ ಹೋಬಳಿ ರಾಮಯ್ಯ, ಯಲ್ಲಪ್ಪ, ನಾರಾಯಣಸ್ವಾಮಿ, ಗಂಗರಾಜು, ಚೌಡಪ್ಪ, ಕಸಬಾ ಹೋಬಳಿಯ ಗಂಗರಾಜು, ವಿನೋದ್, ಶ್ರೀನಿವಾಸ್ ಮತ್ತಿತರ ಪದಾಧಿಕಾರಿಗಳು ಭಾಗವಹಿಸಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin