ತಾಮಸಂದ್ರ ಗ್ರಾಪಂ ಉಪ ಚುನಾವಣೆ : ಜೆಡಿಎಸ್ ಗೆಲುವು ನಿಶ್ಚಿತ

ಈ ಸುದ್ದಿಯನ್ನು ಶೇರ್ ಮಾಡಿ

kanakapura--hotes

ಕನಕಪುರ,ಆ.29- ಹಾರೋಹಳ್ಳಿ ಹೋಬಳಿಯಲ್ಲಿ ಜೆಡಿಎಸ್ ಜನಪರ ಹಾಗೂ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ತಾಮಸಂದ್ರ ಉಪಚುನಾವಣೆಯಲ್ಲಿ ಜನತೆ ನಮ್ಮನ್ನು ಬೆಂಬಲಿಸುತ್ತಾರೆ. ಆದ್ದರಿಂದ ನಮ್ಮ ಗೆಲುವು ನಿಶ್ಚಿತ ಎಂದು ಜೆಡಿಎಸ್ ಮುಖಂಡ ಸೋಮಶೇಖರ್ ತಿಳಿಸಿದರು.ಉಪ ಚುನಾವಣೆಯ ಮತದಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಹಾರೋಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದ ನಾಗೇಶ್ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಂಡಿದ್ದರು.  ಬರಗಾಲ ಬಂದಾಗ ಕುಡಿಯುವ ನೀರು ಪೂರೈಕೆ ಮಾಡಿ ಜನರ ಮನಸ್ಸು ಗೆದ್ದಿದ್ದಾರೆ. ಆದ್ದರಿಂದ ಈ ಉಪಚುನಾವಣೆಯಲ್ಲಿ ಅವರನ್ನು ಆಯ್ಕೆಮಾಡಲಿದ್ದಾರೆ ಎಂದರು.ಬಿಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ನಾರಾಯಣಗೌಡ, ಮಲ್ಲಪ್ಪ, ರಾಮಲಕ್ಷ್ಮಣ ಹಾಗೂ ಜೆಡಿಎಸ್ ಮುಖಂಡರು ಹಾಜರಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin