ತಿಂಗಳಾಂತ್ಯಕ್ಕೆ ಡಿಕೆ ಶಿವಕುಮಾರ್ ಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ

ಈ ಸುದ್ದಿಯನ್ನು ಶೇರ್ ಮಾಡಿ

D-K-Shivakuamr

ಬೆಂಗಳೂರು, ಆ.18- ಕೆಪಿಸಿಸಿಗೆ ನೂತನ ಸಾರಥ್ಯ ವಹಿಸಿಕೊಳ್ಳುವ ಮುಹೂರ್ತ ಸದ್ಯದಲ್ಲೇ ಫಿಕ್ಸ್ ಆಗಲಿದೆ. ನಿರೀಕ್ಷೆಯಂತೆ ಕೆಪಿಸಿಸಿ ಅಧ್ಯಕ್ಷರಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ತಿಂಗಳ ಅಂತ್ಯದೊಳಗೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲೇ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರನ್ನು ನೇಮಕ ಮಾಡಬೇಕೆಂಬ ಪ್ರಸ್ತಾಪವಿತ್ತು. ಹಲವು ಕಾರಣಗಳಿಂದ ಮುಂದೂಡಲಾಗಿತ್ತು. ಈಗ ಕಾಲ ಕೂಡಿ ಬಂದಿದ್ದು, ಡಿ.ಕೆ.ಶಿವಕುಮಾರ್ ಅವರು ಬಹುತೇಕ ಇನ್ನೆರಡು ವಾರಗಳಲ್ಲಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.   ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹೈಕಮಾಂಡ್ ಈ ತೀರ್ಮಾನ ತೆಗೆದುಕೊಂಡಿದೆ.

ಹೈಕಮಾಂಡ್ ನಾಯಕರು ಈಗಾಗಲೇ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತು ಹಾಲಿ ಅಧ್ಯಕ್ಷರಾಗಿರುವ ಡಾ.ಜಿ.ಪರಮೇಶ್ವರ್ ಅವರಿಗೆ ಈ ಮಾಹಿತಿ ರವಾನಿಸಿದೆ. ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು 5ವರ್ಷಕ್ಕೂ ಹೆಚ್ಚು ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ನಡೆಸಿದ್ದರು. ಗೃಹ ಸಚಿವರಾಗಿ, ಮೇಲ್ಮನೆ ಸಭಾನಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷರಾಗಿ ಹೊಣೆಗಾರಿಕೆ ನಿಭಾಯಿಸುವುದು ಕಷ್ಟಸಾಧ್ಯವಾಗುತ್ತದೆ. ಹುದ್ದೆಯಿಂದ ತೆರವುಗೊಳಿಸುವಂತೆ ಹೈಕಮಾಂಡ್ಗೆ ಮನವಿ ಮಾಡಿದ್ದರು.  ಹಿನ್ನೆಲೆಯಲ್ಲಿ ಪ್ರಭಾವಿ ಒಕ್ಕಲಿಗ ಜನಾಂಗಕ್ಕೆ ಹುದ್ದೆ ನೀಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಹಾಗಾಗಿ ಡಿ.ಕೆ.ಶಿವಕುಮಾರ್ ಅವರಿಗೆ ಈ ಹುದ್ದೆ ಒಲಿದು ಬಂದಿದೆ.

► Follow us on –  Facebook / Twitter  / Google+

Facebook Comments

Sri Raghav

Admin

Comments are closed.