ತಿಥಿ ಊಟ ಸೇವಿಸಿದ ಗ್ರಾಮಸ್ಥರು ಅಸ್ವಸ್ಥ

ಈ ಸುದ್ದಿಯನ್ನು ಶೇರ್ ಮಾಡಿ

Tipaturu--01

ತಿಪಟೂರು, ಮೇ 26– ತಿಥಿ ಊಟ ಸೇವಿಸಿ ಗ್ರಾಮಸ್ಥರು ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಮಾಳೇಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಮಸವನಘಟ್ಟ ಗ್ರಾಪಂ ವ್ಯಾಪ್ತಿಯ ಮಾಳೇಕೊಪ್ಪಲು ಗ್ರಾಮದ ಲಕ್ಕಣ್ಣ ಎಂಬುವರು ಸಾವನ್ನಪ್ಪಿದ್ದು, ಇವರ ತಿಥಿ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಊಟ ಸೇವಿಸಿದ್ದಾರೆ. ಕೆಲವೇ ಗಂಟೆಗಳಲ್ಲಿ ಊಟ ಸೇವಿಸಿದವರಿಗೆ ಹೊಟ್ಟೆ ನೋವು, ಸುಸ್ತು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೂಡಲೇ ಎಚ್ಚೆತ್ತ ವೈದ್ಯಾಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಂಡು ಚಿಕಿತ್ಸೆ ನೀಡಿದ್ದಾರೆ.ನಂತರ ತಾಲೂಕು ವೈದ್ಯಾಧಿಕಾರಿ ರವಿಕುಮಾರ ಮತ್ತು ತಂಡದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.  ತಾಲೂಕು ವೈಧ್ಯಾಧಿಕಾರಿ ರವಿಕುಮಾರ ಈ ಬಗ್ಗೆ ಪ್ರತಿಕ್ರಿಯಿಸಿ ಊಟದಲ್ಲಿ ಅಥವಾ ನೀರಿನ ವ್ಯತ್ಯಾಸದಿಂದ ಮೈಲ್ಡ್ ಡಿಹೈಡ್ರೇಶನ್ ಉಂಟಾಗಿದ್ದು, ಸೂಕ್ತ ಚಿಕಿತ್ಸೆ ನೀಡಲಾಗಿದ್ದು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದರು.

ಅಸ್ವಸ್ಥಗೊಳ್ಳಲು ಕಾರಣವೇನು ಎಂಬುದನ್ನು ತಿಳಿಯಲು ರಕ್ತ ಪರೀಕ್ಷೆಗೆ ಹಾಗೂ ಆಹಾರ ಪದಾರ್ಥಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿದ್ದು ಮಾಹಿತಿ ದೊರೆಯುತ್ತದೆ ಎಂದರು.  ಶಾಸಕ ಕೆ.ಷಡಕ್ಷರಿ, ಜೆಡಿಎಸ್ ಮುಖಂಡ ಲೋಕೇಶ್ವರ, ತಾಪಂ ಅಧ್ಯಕ್ಷ ಸುರೇಶ್, ಸದಸ್ಯ ಸುರೇಶ್, ಎಪಿಎಂಸಿ ಅಧ್ಯಕ್ಷ ರವಿಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥಗೊಂಡವರ ಆರೋಗ್ಯ ವಿಚಾರಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin