ತಿಪಟೂರಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಅಂತರ ಕಾಲೇಜು ಸಾಂಸ್ಕೃತಿಕ ಉತ್ಸವ ಪ್ರಶಸ್ತಿ

ಈ ಸುದ್ದಿಯನ್ನು ಶೇರ್ ಮಾಡಿ

tipturu-college
ತಿಪಟೂರು, ಸೆ.6- ಮೈಸೂರಿನ ಕಲಾ ಮಂದಿರದಲ್ಲಿ ವಿಶ್ವಮಾನವ ವಿದ್ಯಾರ್ಥಿ ಯುವ ವೇದಿಕೆ ಪ್ರಾಯೋಜಕತ್ವದಲ್ಲಿ ನಡೆದ ರಾಜ್ಯಮಟ್ಟದ ಅಂತರ ಕಾಲೇಜು ಸಾಂಸ್ಕೃತಿಕ  ಉತ್ಸವದಲ್ಲಿ ತಿಪಟೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಪಡೆದಿದ್ದಾರೆ.ಹಾಸ್ಯ (ಮಿಮಿಕ್ರಿ) ಸ್ಪರ್ಧೆಯಲ್ಲಿ ವಿದ್ಯಾರ್ಥಿ ಬಿ.ಎಸ್. ಚೇತನ್‍ಕುಮಾರ್ ರಾಜ್ಯಕ್ಕೆ ಪ್ರಥಮ ಸ್ಥಾನ ಹಾಗೂ ಕಿರುನಾಟಕ ಸ್ಪರ್ಧೆಯಲ್ಲಿ ಚಂದನ್ ಮತ್ತು ತಂಡದವರು ತೃತೀಯ ಸ್ಥಾನ ಪಡೆದಿದ್ದಾರೆ. ಈ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲ ಪ್ರೊ .ಹೆಚ್.ಬಿ.ಕುಮಾರಸ್ವಾಮಿ, ಸಾಂಸ್ಕೃತಿಕ  ಕಾರ್ಯದರ್ಶಿ ಪ್ರೊ .ಚಿಕ್ಕಹೆಗ್ಗಡೆ, ವ್ಯವಸ್ಥಾಪಕಿ ರಂಗಲಕ್ಷ್ಮಿ ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin