ತಿರುಮಲದಲ್ಲಿ ಕರ್ನಾಟಕ ಭಕ್ತರಿಗೆ ಹೆಚ್ಚಿನ ವಸತಿ ಸೌಲಭ್ಯ

ಈ ಸುದ್ದಿಯನ್ನು ಶೇರ್ ಮಾಡಿ

Rudrappa-Manappa-Lamani

ಬೆಂಗಳೂರು, ಫೆ.6- ತಿರುಪತಿ ತಿರುಮಲದಲ್ಲಿರುವ ಕರ್ನಾಟಕ ರಾಜ್ಯ ಛತ್ರದ ಜಾಗದಲ್ಲಿ ಭಕ್ತಾದಿಗಳಿಗೆ ಹೆಚ್ಚಿನ ವಸತಿ ಗೃಹಗಳನ್ನು ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಜವಳಿ ಹಾಗೂ ಮುಜರಾಯಿ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ವಿಧಾನಪರಿಷತ್‍ಗೆ ಹೇಳಿದರು.  ಪ್ರಶ್ನೋತ್ತರ ಕಲಾಪದಲ್ಲಿ ಆರ್.ಧರ್ಮಸೇನ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾಮಗಾರಿ ಕೈಗೊಳ್ಳುವ ಪ್ರಾರಂಭಿಕ ಹಂತದಲ್ಲಿಯೇ ಸ್ಥಳೀಯ ನ್ಯಾಯವಾದಿ ಟಿ.ನರಸಿಂಹನ್ ಎನ್ನುವವರು ಆಂಧ್ರಪ್ರದೇಶದ ಹೈಕೋರ್ಟ್ ನಲ್ಲಿ ತಡೆಯಾಜ್ಞೆ ತಂದಿದ್ದರಿಂದ ಕಾಮಗಾರಿ ಮುಂದುವರೆಸಲು ಸಾಧ್ಯವಾಗಿಲ್ಲ. ಮಧ್ಯಂತರ ಆದೇಶ ತೆರವು ಗೊಳಿಸಲು ಕ್ರಮ ವಹಿಸಲಾಗಿದೆ.

ಕಳೆದ ಸಾಲಿನ ಸೆಪ್ಟೆಂಬರ್‍ನಲ್ಲಿ ಟಿಟಿಡಿ ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಗಳೊಂದಿಗೆ ಸಭೆ ನಡೆಸಿ ರಾಜ್ಯದ ಛತ್ರದ 61,390 ಚದರಡಿ ವಿಸ್ತೀರ್ಣದ ಜಾಗದಲ್ಲಿ ಕಟ್ಟಡ ನಿರ್ಮಿಸಿಕೊಳ್ಳಲು ಪರಿಷ್ಕøತ ನಕ್ಷೆ ಸಲ್ಲಿಸಿದಲ್ಲಿ ಮಂಜೂರಾತಿ ನೀಡುವ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಅದರಂತೆ ಕ್ರಮಕೈಗೊಳ್ಳಲಾಗುತ್ತಿದೆ. ಆಂಧ್ರಪ್ರದೇಶದ ಮಂಜೂ ರಾತಿ ದೊರೆತ ನಂತರ ನ್ಯಾಯಾಲಯದ ತೀರ್ಪಿನಂತೆ ಕ್ರಮಕೈಗೊಳ್ಳಲಾಗುವುದು. ತಿರುಮಲದ ಕರ್ನಾಟಕ ರಾಜ್ಯ ಛತ್ರಕ್ಕೆ ಲಭ್ಯವಿರುವ 7 ಎಕರೆ 5 ಗುಂಟೆ ಜಮೀನಿನಲ್ಲಿ ಭಕ್ತಾದಿ ಗಳಿಗೆ ವಸತಿ ಸೌಕರ್ಯ ಕಲ್ಪಿಸಲು ಉದ್ದೇಶಿಸಲಾಗಿದ್ದು, ತಡೆಯಾಜ್ಞೆ ತೆರವಿನ ನಂತರ ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin