ತಿರುವನಂತಪುರಂ ಬಿಜೆಪಿ ಕಚೇರಿ ಮೇಲೆ ಬಾಂಬ್ ದಾಳಿ, ಇಬ್ಬರಿಗೆ ಗಾಯ
ಈ ಸುದ್ದಿಯನ್ನು ಶೇರ್ ಮಾಡಿ
ತಿರುವನಂತಪುರಂ, ಸೆ.7- ಇಲ್ಲಿನ ಬಿಜೆಪಿ ಕಚೇರಿಯ ಮೇಲೆ ದುಷ್ಕರ್ಮಿಗಳು ಕಚ್ಚಾ ಬಾಂಬ್ ದಾಳಿ ನಡೆಸಿದ್ದು, ಯಾರಿಗೂ ಪ್ರಾಣಾಪಾಯವಾಗಿಲ್ಲ. ಇಂದು ಬೆಳಗಿನ ಜಾವ ಈ ಘಟನೆ ನಡೆದಿದೆ. ಬಾಂಬ್ ಎಸೆತದಿಂದ ಕಚೇರಿ ಮುಖ್ಯ ದ್ವಾರದ ಗಾಜುಗಳು ಪುಡಿಪುಡಿಯಾಗಿವೆ. ಕಚೇರಿಯಲ್ಲಿದ್ದ ಇಬ್ಬರು ಭದ್ರತಾ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎಸ್.ಸ್ಸರ್ಜನ್ಕುಮಾರ್ ತಿಳಿಸಿದ್ದಾರೆ. ಈ ಸಂದರ್ಭ ಎರಡನೆ ಮಹಡಿ ಮೇಲೆ ಮೂರ್ನಾಲ್ಕು ಬಿಜೆಪಿ ಕಾರ್ಯಕರ್ತರಿದ್ದರು. ಆದರೆ ಅವರಾರಿಗೂ ಏನೂ ಅಪಾಯವಾಗಿಲ್ಲ.ಬಿಜೆಪಿ ರಾಜ್ಯಾಧ್ಯಕ್ಷ ಕುಮ್ಮನಮ್ ರಾಜಶೇಖರನ್ ಕಚೇರಿ ಬಿಟ್ಟು ತೆರಳಿದ ಮೇಲೆ ಬರೀ 45 ನಿಮಿಷಗಳ ಬಳಿಕ ಈ ಬಾಂಬ್ ದಾಳಿ ನಡೆದಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
► Follow us on – Facebook / Twitter / Google+
Facebook Comments