ತಿಹಾರ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ನಿರ್ಭಯಾ ಗ್ಯಾಂಗ್ರೇಪ್ ಅಪರಾಧಿ ವಿನಯ್

ಈ ಸುದ್ದಿಯನ್ನು ಶೇರ್ ಮಾಡಿ

Shamra-a

ನವದೆಹಲಿ, ಆ.25-ದೇಶವನ್ನು ಬೆಚ್ಚಿ ಬೀಳಿಸಿದ್ದ ನಿರ್ಭಯಾ ಗ್ಯಾಂಗ್ರೇಪ್ ಮತ್ತು ಕೊಲೆ ಪ್ರಕರಣದ ಪ್ರಮುಖ ಅಪರಾಧಿಗಳಲ್ಲಿ ಒಬ್ಬನಾದ ವಿನಯ್ ಶರ್ಮಾ ಅತಿ ಬಿಗಿ ಭದ್ರತೆಯ ತಿಹಾರ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಗಂಭೀರ ಸ್ಥಿತಿಯಲ್ಲಿರುವ ಆತನನನ್ನು ಆಸ್ಪತ್ರೆಗೆ ಸೇರಿಸಲಾಗಿದೆ.   ತಿಹಾರ್ ಕಾರಾಗೃಹದಲ್ಲಿ ನಿನ್ನೆ ರಾತ್ರಿ ವಿನಯ್  ಮಾತ್ರೆಗಳನ್ನು ಸೇವಿಸಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ. ತೀವ್ರ ಅಸ್ವಸ್ಥಗೊಂಡ ಆತನನ್ನು ದೆಹಲಿಯ ದೀನ್ ದಯಾಳ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ದಕ್ಷಿಣ ದೆಹಲಿಯಲ್ಲಿ ಡಿಸೆಂಬರ್ 16, 2012ರಂದು ರಾತ್ರಿ ವಿನಯ್ ಶi, ರಾಮ್ ಸಿಂಗ್, ಮುಖೇಶ್ ಪವನ್ ಮತ್ತು ಅಕ್ಷಯ್ ಕುಮಾರ್ ಸಿಂಗ್ ಸೇರಿದಂತೆ ಆರು ಮಂದಿ ಚಲಿಸುವ ಬಸ್ನಲ್ಲಿ 23 ವರ್ಷದ ಅರೆ ವೈದ್ಯಕೀಯ ವಿದ್ಯಾರ್ಥಿ ನಿರ್ಭಯಾ (ಜ್ಯೋತಿ ಸಿಂಗ್) ಮೇಲೆ ಬರ್ಬರ ಅತ್ಯಾಚಾರ ಎಸಗಿ ಮಾರಣಾಂತಿಕ ಹಲ್ಲೆ ನಡೆಸಿದ್ದರು. ನಂತರ ಆಕೆಯನ್ನು ಬಸ್ನಿಂದ ರಸ್ತೆಗೆ ಎಸೆದು ಪರಾರಿಯಾಗಿದ್ದರು. ಈ ಘಟನೆ ಬಗ್ಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ಮತ್ತು ಪ್ರತಿಭಟನೆಗಳಿಗೆ ಕಾರಣವಾಗಿತ್ತು. ತೀವ್ರ ಗಾಯಗೊಂಡ ನಿರ್ಭಯಾ ಚಿಕಿತ್ಸೆ ಫಲಕಾರಿಯಾಗದೇ ಡಿಸೆಂಬರ್ 29ರಂದು ಸಿಂಗಪುರ್ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಳು.

ಈ ಪ್ರಕರಣದ ಸಂಬಂಧ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಆರೋಪಿಗಳಲ್ಲಿ ಇಬ್ಬರು ಅಪ್ರಾಪ್ತರಾದ ಕಾರಣ ವಿನಯ್ ಸೇರಿದಂತೆ ಉಳಿದ ನಾಲ್ವರು ಆರೋಪಿಗಳಿಗೆ ವಿಚಾರಣಾ ನ್ಯಾಯಾಲವು ನೀಡಿದ್ದ ಮರಣದಂಡನೆ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಎತ್ತಿ ಹಿಡಿದಿತ್ತು. ಈ ತೀರ್ಪಿನ ವಿರುದ್ಧ ಆಪಾದಿತರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.   ಈ ಪ್ರಕರಣದ ಆರೋಪಿ ರಾಮ್ ಸಿಂಗ್ 2013ರಲ್ಲಿ ತಿಹಾರ್ ಜೈಲಿನ ಕೋಣೆಯೊಂದರಲ್ಲಿ ಮೃತಪಟ್ಟಿದ್ದನು. ಈಗ ವಿನಯ್ ಶರ್ಮ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

► Follow us on –  Facebook / Twitter  / Google+

Facebook Comments

Sri Raghav

Admin