ತೀವ್ರ ಅನಾರೋಗ್ಯ, ರವಿ ಬೆಳಗೆರೆ ಆಸ್ಪತ್ರೆಗೆ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

Ravi-Belegere--01

ಬೆಂಗಳೂರು, ಜೂ.24- ತೀವ್ರ ಅನಾರೋಗ್ಯ ನಿಮಿತ್ತ ಹಿರಿಯ ಪತ್ರಕರ್ತ ರವಿ ಬೆಳಗೆರೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರ ಕನ್ನಡದ ಜೋಯಿಡಾದಲ್ಲಿರುವ ತಮ್ಮ ಮನೆಗೆ ತೆರಳಿದ್ದ ರವಿ ಬೆಳಗೆರೆ ಅವರಿಗೆ ಬೆಳಗಿನ ಜಾವ 3 ಗಂಟೆ ಸುಮಾರಿನಲ್ಲಿ ತೀವ್ರ ರಕ್ತದೊತ್ತಡ ಮತ್ತು ಅತಿಯಾದ ಮಧುಮೇಹ ಕಾಣಿಸಿಕೊಂಡಿದ್ದು, ಅಸ್ವಸ್ಥರಾದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.  ಹುಬ್ಬಳ್ಳಿ-ಧಾರವಾಡ ರಸ್ತೆಯಲ್ಲಿರುವ ಎಸ್‍ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ರವಿ ಬೆಳಗೆರೆ ಅವರಿಗೆ ರಾಜಕಾರಣಿಯೊಬ್ಬರ ವಿರುದ್ಧ ಮಾನಹಾನಿ ವರದಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಸದನ ಸಮಿತಿ ಒಂದು ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿರುವುದನ್ನು ಸ್ಮರಿಸಬಹುದು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin