ತೆಂಗು, ಅಡಿಕೆ ಬೆಳಗಾರರ ನೆರವಿಗೆ ಕೇಂದ್ರ ಸರ್ಕಾರ ಮುಂದಾಗಲಿ : ಜಯಚಂದ್ರ

ಈ ಸುದ್ದಿಯನ್ನು ಶೇರ್ ಮಾಡಿ

dgsfdggತುಮಕೂರು, ಆ.4- ರಾಜ್ಯದಲ್ಲಿ ತೆಂಗು ಮತ್ತು ಅಡಿಕೆ ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದು, ಕೂಡಲೇ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ರೈತರ ನೆರವಿಗೆ ಧಾವಿಸಬೇಕೆಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಒತ್ತಾಯಿಸಿದ್ದಾರೆ.  ಇಂದು ಮುಂಜಾನೆ ಹೊರಡುವ ಮುನ್ನ ಈ ಸಂಜೆ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ತೆಂಗು ಮತ್ತು ಅಡಿಕೆ ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದಾರೆ. ಕೇಂದ್ರ ಸರ್ಕಾರ ಬೆಂಬಲ ಬೆಲೆಯನ್ನು ನಿಗದಿಗೊಳಿಸಬೇಕು. ಈ ಕುರಿತು  ಕೃಷಿ, ನೀರಾವರಿ ಸೇರಿದಂತೆ  ಸಂಬಂಧಪಟ್ಟ ಸಚಿವರ ಭೇಟಿ ಮಾಡಿ  ಚರ್ಚಿಸಿ ಸಮಸ್ಯೆ ಬಗೆಹರಿಸಲು ತಾವು ದೆಹಲಿ ಪ್ರವಾಸ ಕೈಗೊಂಡಿರುವುದಾಗಿ ತಿಳಿಸಿದರು. ರಾಜ್ಯಕ್ಕೆ ಹಲವು ಯೋಜನೆಗಳ ಅನುಷ್ಠಾನಕ್ಕೆ ಅನುದಾನ ತರಲು ದೆಹಲಿಯಲ್ಲಿ ಮೂರು ದಿನಗಳ ಕಾಲ ವಾಸ್ತವ್ಯ ಹೂಡುತ್ತಿರುವುದು ಹೇಳಿದರು.
ಮಹದಾಯಿ ವಿಚಾರವಾಗಿ ವಕೀಲರ ಸಭೆಯನ್ನು ಇಂದು ಕರೆಯಲಾಗಿದ್ದು, ಯಮನೂರಿನಲ್ಲಿ ರೈತರ ಮೇಲೆ ನಡೆದ ಪೊಲೀಸರ ದೌರ್ಜನ್ಯ ಹೇಯ ಕೃತ್ಯವಾಗಿದ್ದು, ಈ ಬಗ್ಗೆ ದೆಹಲಿಯಿಂದ ಮರಳಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ನಡೆಸಿ ನೊಂದ ರೈತರಿಗೆ ಆತ್ಮಸ್ಥೈರ್ಯ ತುಂಬುವುದಾಗಿ ತಿಳಿಸಿದರು.  ಮೈಸೂರಿನ ನ್ಯಾಯಾಲಯದಲ್ಲಿ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ಈಗಾಗಲೇ ಆಂಧ್ರ ಮತ್ತು ತಮಿಳುನಾಡು ರಾಜ್ಯದ ತನಿಖಾ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದು, ಸದ್ಯದಲ್ಲೇ ಆರೋಪಿಗಳ ಪತ್ತೆ ಹಚ್ಚಲಾಗುವುದು ಎಂದರು.  ತುಮಕೂರು ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲೂ ಸೂಕ್ತ ಭದ್ರತೆ ಒದಗಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

► Follow us on –  Facebook / Twitter  / Google+

ಡೌನ್ಲೋಡ್ ‘ಈ ಸಂಜೆ’ ಮೊಬೈಲ್  ಆಪ್ 

Facebook Comments

Sri Raghav

Admin