ತೆಂಗು- ಅಡಿಕೆ ಬೆಳೆ ಪರಿಹಾರಕ್ಕಾಗಿ ವಿಧಾನಸಭೆಯಲ್ಲಿ ಶಾಸಕ ಶಿವಲಿಂಗೇಗೌಡ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

Session-Belagavi--01

ಬೆಳಗಾವಿ,ನ.15- ತೆಂಗು ಮತ್ತು ಅಡಿಕೆ ಬೆಳೆ ಹಾನಿಗೀಡಾಗಿದ್ದು ಪರಿಹಾರ ನೀಡಬೇಕೆಂದು ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ವಿಧಾನಸಭೆಯಲ್ಲಿಂದು ಆಗ್ರಹಿಸಿದರು. ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ನಿಲುವಳಿ ಮಂಡಿಸಿ ಪೂರ್ವಭಾವಿ ಪ್ರಸ್ತಾಪ ಮಾಡಿ, ಹಾಸನ ಜಿಲ್ಲೆಯಲ್ಲಿ ಮೂರು ವರ್ಷಗಳಿಂದ ಬರಗಾಲ ಉಂಟಾಗಿ ಅಂತರ್ಜಲ ಕುಸಿತ ಉಂಟಾದ ಪರಿಣಾಮ ಅಡಿಕೆ ಮತ್ತು ತೆಂಗು ಬೆಳೆ ಹಾಳಾಗಿ ಹೋಗಿದೆ. ಸುಮಾರು ಎರಡೂವರೆ ಸಾವಿರ ಕೋಟಿ ನಷ್ಟ ಉಂಟಾಗಿದೆ. ಇದರ ಬಗ್ಗೆ ಚರ್ಚೆ ಮಾಡಲು ಅವಕಾಶ ನೀಡಬೇಕು ಎಂದರು.

ಅಡಿಕೆ ಮತ್ತು ತೆಂಗು ಬೆಳೆ ನಾಶವಾಗಿದ್ದರೂ ಸರ್ಕಾರ ಇದರ ಬಗ್ಗೆ ಗಮನಹರಿಸಿಲ್ಲ. ಈ ಬಗ್ಗೆ ಎಷ್ಟೇ ಹೇಳಿದರೂ ಸರ್ಕಾರ ಕಿವಿ ಇಲ್ಲದಂತಿದೆ ಎಂದು ಟೀಕಿಸಿದರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ವೈಎಸ್‍ವಿ ದತ್ತ ಕೂಡ ತೆಂಗಿನ ಬೆಳೆಗಳು ನಾಶವಾಗಿದ್ದು, ಇದರ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕೆಂದು ಸಭಾಧ್ಯಕ್ಷರಲ್ಲಿ ಮನವಿ ಮಾಡಿದರು.  ಸಭಾಧ್ಯಕ್ಷರು ನಿಲುವಳಿ ಸೂಚನೆಗೆ ಬದಲಾಗಿ ಬೇರೆ ಚರ್ಚೆಗೆ ಅವಕಾಶ ನೀಡಿದರು.  ಇದೇ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಮಾತನಾಡಿ, ರೈತರು ಸಂಕಷ್ಟದಲ್ಲಿದ್ದಾರೆ. ಅವರು ಬೆಳೆಯುವ ಕಬ್ಬಿಗೆ ನಿರ್ದಿಷ್ಟ ಬೆಲೆ ನಿಗದಿ ಮಾಡಬೇಕು. ಇದರ ಬಗ್ಗೆ ಚರ್ಚೆಗೆ ಅವಕಾಶ ಮಾಡಿಕೊಡಬೇಕೆಂದು ಕೋರಿದರು.

Facebook Comments

Sri Raghav

Admin